ಕನಕಗಿರಿ: ‘ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಮಾನಸಿಕ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತಿವೆ. ಇತರರ ಜೀವನದ ವೈಭವದ ಕ್ಷಣಗಳನ್ನು ನೋಡಿ ನಮ್ಮ ಜೀವನವನ್ನು ಅವರೊಂದಿಗೆ ಹೋಲಿಸಿಕೊಳ್ಳುವುದು ಅನಗತ್ಯ ಆತಂಕ ಮತ್ತು ಕೀಳರಿಮೆಗೆ ಕಾರಣವಾಗುತ್ತಿದೆ’ ಎಂದು ಗಂಗಾವತಿ ಉಪ ವಿಭಾಗ ಆಸ್ಪತ್ರೆಯ ಆಪ್ತ ಸಮಾಲೋಚಕ ಶಿವಾನಂದ ನಾಯ್ಕರ್ ತಿಳಿಸಿದರು.

ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಘಟಕದ ವತಿಯಿಂದ ಆಯೋಜಿಸಿದ್ದ ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣಾ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದಿನ ಯುವ ಜನಾಂಗದಲ್ಲಿ ಪೋಮೋ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದ್ದು, ಆತ್ಮಹತ್ಯೆಯಂತಹ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿವೆ. ಹೀಗಾಗಿ ಡಿಜಿಟಲ್ ಜಗತ್ತಿನಿಂದ ಆಗಾಗ ವಿರಾಮ ಪಡೆಯುವುದು ಇಂದಿನ ತುರ್ತು ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.

ಆಪ್ತ ಸಮಾಲೋಚಕ ಅಕ್ಬರಸಾಬ ಮಾತನಾಡಿ, ‘ಮಾನಸಿಕವಾಗಿ ಆರೋಗ್ಯವಾಗಿರುವ ವ್ಯಕ್ತಿಯು ತನ್ನ ಸಾಮರ್ಥ್ಯವನ್ನು ಪೂರ್ಣವಾಗಿ ಬಳಸಿಕೊಳ್ಳಬಲ್ಲ. ಹಾಗೆಯೇ, ಜೀವನದ ಸಾಮಾನ್ಯ ಒತ್ತಡಗಳನ್ನು ಸಮರ್ಥವಾಗಿ ಎದುರಿಸಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡುತ್ತಾನೆ’ ಎಂದು ಹೇಳಿದರು.

ಮಾನಸಿಕ ಆರೋಗ್ಯ ಹದಗೆಟ್ಟರೆ ಖಿನ್ನತೆ, ಆತಂಕ ಮತ್ತು ದೈಹಿಕ ಕಾಯಿಲೆಗಳಿಗೂ ದಾರಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರಭಾರ ಪ್ರಾಂಶುಪಾಲ ಭಜರಂಗ ಬಲಿ, ರೆಡ್ ಕ್ರಾಸ್ ಘಟಕದ ಸಂಯೋಜಕಿ ಸರ್ವಮಂಗಳಮ್ಮ.ಟಿ.ಆರ್ ಮಾತನಾಡಿದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥ ರಕ್ಷಿತ್.ಎ, ಕನ್ನಡ ವಿಭಾಗದ ಮುಖ್ಯಸ್ಥೆ ಲಲಿತಾ.ಎನ್.ಕೆ, ಅತಿಥಿ ಉಪನ್ಯಾಸಕರಾದ ಗೋಪಾಲರೆಡ್ಡಿ ಮಾದಿನಾಳ, ಬೋರಯ್ಯ, ಶರಣಪ್ಪ ಸಾಸಲಮರಿ, ವಿಜಯ್ ಸರೋದೆ, ಬಾಲಪ್ಪ ಕುರಿ ಭಾಗವಹಿಸಿದ್ದರು.
ಬಸವರಾಜ ಹಾಗೂ ಕೃಷ್ಣಾ ಸ್ವಾಗತಿಸಿದರು, ಸಾನಿಯಾ ನಿರೂಪಿಸಿದರು. ನಾಗರಾಜ ಗದ್ದಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.