ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ

Published 5 ಜೂನ್ 2023, 13:57 IST
Last Updated 5 ಜೂನ್ 2023, 13:57 IST
ಅಕ್ಷರ ಗಾತ್ರ

ಕುಷ್ಟಗಿ: ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಲ್ಯಾಟಲರ್‌ ಎಂಟ್ರಿ ಯೋಜನೆಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎರಡು ವರ್ಷದ ಐಟಿಐ ಮತ್ತು ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದವರಿಗೆ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಕಲ್ಪಿಸಲಾಗುತ್ತದೆ. ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ 6, ಕಂಪ್ಯೂಟರ್‌ ಸೈನ್‌ ಎಂಜಿನಿಯರಿಂಗ್ ವಿಭಾಗದಲ್ಲಿ 3, ಎಲೆಕ್ಟ್ರಾನಿಕ್‌ ಮತ್ತು ಕಮ್ಯೂನಿಕೇಶನ್ ಎಂಜಿನಿಯರಿಂಗ್‌ ವಿಭಾಗದಲ್ಲಿದ 6 ಸ್ಥಾನಗಳು ಇವೆ. ಅರ್ಜಿ ಸಲ್ಲಿಸಲು ಜೂನ್‌ 20 ಕೊನೆಯ ದಿನವಾಗಿದೆ. ಎರಡು ವರ್ಷಗಳ ಐಟಿಐ ಮೂಲ ಅಂಕಪಟ್ಟಿ ಅಥವಾ ದ್ವಿತೀಯ ಪಿಯು ಮೂಲ ಅಂಕಪಟ್ಟಿ, ಮೂಲ ವರ್ಗಾವಣೆ ಪತ್ರ ಅಥವಾ ಎನ್‌ಒಸಿ, ಜಾತಿ, ಆದಾಯ ಪ್ರಮಾಣಪತ್ರ ಮತ್ತು 7 ವರ್ಷಗಳ ವ್ಯಾಸಂಗ ಪ್ರಮಾಣಪತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಾಚಾರ್ಯ ಹನುಮೇಶ ತಿಳಿಸಿದ್ದಾರೆ. ಮಾಹಿತಿಗಾಗಿ 90084 42737 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT