ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದಾಧಿಕಾರಿಗಳಿಗೆ ಅಗೌರವದ ಆರೋಪ; ಮನವಿ

Published 5 ಡಿಸೆಂಬರ್ 2023, 7:05 IST
Last Updated 5 ಡಿಸೆಂಬರ್ 2023, 7:05 IST
ಅಕ್ಷರ ಗಾತ್ರ

ಕೊಪ್ಪಳ: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶದ ಸುಧಾರಣೆಗೆ ಸರ್ಕಾರಿ, ಖಾಸಗಿ, ಅನುದಾನ ಮತ್ತು ಅನುದಾನ ರಹಿತ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಕಾರ್ಯಾಗಾರ ಆಯೋಜಿಸಲಾಗಿತ್ತು.

ಈ ವೇಳೆ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಅಗೌರವ ತೋರಲಾಗಿದೆ. ಅವರನ್ನು ವೇದಿಕೆ ಮೇಲೆ ಕರೆದಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಆದ್ದರಿಂದ ಈ ಸಂಘದ ಜಿಲ್ಲಾಧ್ಯಕ್ಷ ಸೋಮಪ್ಪ ಹರ್ತಿ, ಪ್ರೌಢಶಾಲಾ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಜಾಕೀರಹುಸೇನ್‌ ಕುಕನೂರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಶಂಕರಗೌಡ ಮಾಲಿಪಾಟೀಲ ಅವರು ಡಿಡಿಪಿಐಗೆ ಖಂಡನಾ ನಿರ್ಣಯದ ಮನವಿ ಸಲ್ಲಿಸಿದ್ದಾರೆ.

‘ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರಕ್ಕೆ ಆಹ್ವಾನಿಸಿ ನಿರೂಪಣೆ ಮಾಡಿದ ಬಾಬುಸಾಬ ಉದ್ದೇಶಪೂರ್ವಕವಾಗಿ ಪದಾಧಿಕಾರಿಗಳನ್ನು ಸ್ವಾಗತಿಸಿಲ್ಲ. ಇದು ಸರಿಯಲ್ಲ’ ಎಂದು ಹೇಳಿದ್ದಾರೆ.     

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT