ಕಾರಟಗಿ: ‘ಮುಂಗಾರು ಕೃಷಿ ಚಟುವಟಿಕೆಗಳು ಗರಿಗೆದರುತ್ತಿದ್ದು, ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ವಿತರಣೆಯಲ್ಲಿ ಗೊಂದಲ, ತೊಂದರೆಯಾಗದಂತೆ ವಿತರಕರು ನೋಡಿಕೊಳ್ಳಬೇಕು’ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್ ಹೇಳಿದರು.

ತಾಲ್ಲೂಕು ಕ್ರಿಮಿನಾಶಕ, ರಸಗೊಬ್ಬರ ಹಾಗೂ ಬೀಜ ಮಾರಾಟಗಾರ ಸಂಘದಲ್ಲಿ ಗುರುವಾರ ನಡೆಸಿದ ವಿತರಕರ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನಲ್ಲಿ 32 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆ ಗುರಿ ಹೊಂದಲಾಗಿದೆ. ವಿತರಣಾ ನಾಲೆಯ ಕೊನೆ ಭಾಗದ ಮಿತ ನೀರಾವರಿ ಪ್ರದೇಶದಲ್ಲಿ ಮೆಕ್ಕೆಜೋಳ, ತೊಗರಿ ಬಿತ್ತನೆಗೆ ರೈತರು ಸಿದ್ಧತೆಯನ್ನು ಮಾಡಿಕೊಂಡಿದ್ದು, ಅವರ ಬೇಡಿಕೆಗೆ ತಕ್ಕಂತೆ ಕಾರಟಗಿ ಹಾಗೂ ಸಿದ್ದಾಪುರ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳ ವಿತರಣೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.

ತಾಲ್ಲೂಕು ಕ್ರಿಮಿನಾಶಕ, ರಸಗೊಬ್ಬರ ಹಾಗೂ ಬೀಜ ಮಾರಾಟಗಾರ ಡೀಲರ್ಸ್ ಸಂಘದ ಅಧ್ಯಕ್ಷ ಸಂಗಮೇಶಗೌಡ ಬೂದಗುಂಪಾ ಮಾತನಾಡಿದರು.

ಸಂಘದ ಉಪಾಧ್ಯಕ್ಷ ವೀರನಗೌಡ, ಪ್ರಧಾನ ಕಾರ್ಯದರ್ಶಿ ಪಂಪನಗೌಡ ಹಾಗೂ ರುದ್ರಗೌಡ ಸೇರಿದಂತೆ ತಾಲ್ಲೂಕಿನ ವಿತರಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.