ಕೊಪ್ಪಳ: ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಗುರುವಾರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಹಣ್ಣು ಬೆಳೆಗಳ ಸಂಸ್ಕರಣ ಘಟಕಗಳು, ಕೃಷಿ ಹೊಂಡ, ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳ ವೀಕ್ಷಣೆ ಮಾಡಿ ರೈತರೊಂದಿಗೆ ಚರ್ಚಿಸಿದರು.

ತಾಲ್ಲೂಕಿನ ಮೆತಗಲ್ ಗ್ರಾಮದಲ್ಲಿ ನಬಾರ್ಡ ವತಿಯಿಂದ ನಿರ್ಮಿಸುತ್ತಿರುವ ಹಣ್ಣು ಬೆಳೆಗಳ ಸಂಸ್ಕರಣ ಘಟಕದಲ್ಲಿ ಪರಿಶೀಲನೆ ನಡೆಸಿದರು. ಯಲಬುರ್ಗಾ ತಾಲ್ಲೂಕಿನ ಮಾಟಲದಿನ್ನಿ ಗ್ರಾಮದಲ್ಲಿ ರೈತರ ಕೃಷಿ ಭಾಗ್ಯ ಯೋಜನೆ, ಉದ್ಯೋಗ ಖಾತ್ರಿ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಕೃಷಿಹೊಂಡ, ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳ ವೀಕ್ಷಣೆ ಮಾಡಿದರು.

ಪ್ರಗತಿಪರ ಕೃಷಿಕ ಬಸಯ್ಯ ಹಿರೇಮಠ ಅವರ ನುಗ್ಗೆಕಾಯಿ ಸಂಸ್ಕರಣ ಘಟಕ, ಕುಷ್ಟಗಿ ತಾಲ್ಲೂಕಿನ ಬ್ಯಾಲಿಹಾಳ ಗ್ರಾಮದ ನೈಸರ್ಗಿಕ ಕೃಷಿಕ ದೇವಿಂದ್ರ ಬಳೂಟಗಿಗೆ ತೆರಳಿ ಕೃಷಿಗೆ ಸಂಬಂಧಿಸಿದ ವಿಷಯಗಳ ಕುರಿತು ರೈತರೊಂದಿಗೆ ಚರ್ಚೆ ನಡೆಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೆಶಕ ರುದ್ರೇಶಪ್ಪ ಟಿ.ಎಸ್., ಉಪನಿರ್ದೆಶಕ ಸಿದ್ದೇಶ್ವರ ಎಲ್., ಮೀನುಗಾರಿಕೆ ಇಲಾಖೆಯ ಉಪನಿರ್ದೆಶಕ ಶ್ರೀನಿವಾಸ ಕುಲಕರ್ಣಿ, ಕೊಪ್ಪಳ ಕೃಷಿ ತಂತ್ರಜ್ಞರ ಸಂಸ್ಥೆಯ ಉಪಾಧ್ಯಕ್ಷ ವೀರಣ್ಣ ಕಮತರ, ತೋಟಗಾರಿಕೆ ಇಲಾಖೆಯ ಉಪನಿರ್ದೆಶಕ ಕೃಷ್ಣ ಉಕ್ಕುಂದ, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಡಾ. ರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.