ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಂಘಟಿತ ಕಾರ್ಮಿಕರಿಗೆ ನೆರವು ನೀಡಿ: ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌

ವಾರ್ಡ್‌ವಾರು ಮಾಹಿತಿ ಸಂಗ್ರಹಕ್ಕೆ ಸೂಚನೆ
Last Updated 6 ಜೂನ್ 2021, 4:29 IST
ಅಕ್ಷರ ಗಾತ್ರ

ಕೊಪ್ಪಳ: ಕೋವಿಡ್-19 ಎರಡನೇ ಅಲೆಯನ್ನು ತಡೆಗಟ್ಟಲು ಲಾಕ್‌ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯ ಕಳೆದುಕೊಂಡಿರುವ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಣೆ ಮಾಡಿರುವ ಆರ್ಥಿಕ ನೆರವನ್ನು ಜಿಲ್ಲೆಯ ಕಾರ್ಮಿಕರಿಗೆ ಒದಗಿಸಲು ಅಗತ್ಯ ಮಾಹಿತಿ ಕ್ರೋಢೀಕರಿಸಿ ನೆರವು ನೀಡಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‌ಡೌನ್ ನಿಂದ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಆರ್ಥಿಕ ನೆರವು ಘೋಷಿಸಿದ ಹಿನ್ನೆಲೆಯಲ್ಲಿ ಯೋಜನೆ ಪರಿಣಾಮಕಾರಿ ಅನುಷ್ಠಾನಗೊಳಿಸಲು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಹಲವು ಅಸಂಘಟಿತ ವರ್ಗಗಳಿಗೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯವಿಲ್ಲದೆ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸೇರಿದಂತೆ ಒಟ್ಟು 11 ವರ್ಗಗಳ ಕಾರ್ಮಿಕರಿಗೆ ಸರ್ಕಾರ ತಲಾ ₹2 ಸಾವಿರ ಆರ್ಥಿಕ ನೆರವನ್ನು ನೀಡುತ್ತಿದೆ ಎಂದರು.

ಆದ್ದರಿಂದ ಜಿಲ್ಲೆಯಲ್ಲಿ ಇರುವ ಅಸಂಘಟಿತ ಕಾರ್ಮಿಕರ ಯೂನಿಯನ್‌ಗಳ ಮೂಲಕ ಕಾರ್ಮಿಕರನ್ನು ಗುರುತಿಸಿ, ಅಗತ್ಯ ಮಾಹಿತಿ ಕ್ರೋಢೀಕರಿಸಿ, ಪಟ್ಟಿ ಸಿದ್ದಪಡಿಸಿ ಅವರಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗಾಗಿ ಜಿಲ್ಲೆಯಲ್ಲಿರುವ ಎಲ್ಲ ಕಾಮನ್ ಸರ್ವೀಸ್ ಸೆಂಟರ್‌ಗಳನ್ನು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಅರ್ಜಿ ಸಲ್ಲಿಕೆಗೆ ಬರುವ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಕೋವಿಡ್ ಲಸಿಕೆ ಹಾಕಲು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಕಾಮನ್ ಸರ್ವೀಸ್ ಸೆಂಟರ್‌ಗಳಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಹೆಚ್ಚಿನ ಜನರು ಸೇರುವುದರಿಂದದೈಹಿಕ ಅಂತರದೊಂದಿಗೆ ಫಲಾನುಭವಿಗಳು ಅರ್ಜಿ ಸಲ್ಲಿಕೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನ್ ಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ, ಪ್ರೊಬೇಷನರಿ ಅಧಿಕಾರಿ ಹೇಮಂತ್, ಜಿಲ್ಲಾ ಕಾರ್ಮಿಕ ಅಧಿಕಾರಿ ವೀಣಾ ಮಾಸ್ತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಿ.ಬಿ.ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಅಸಂಘಟಿತ ಕಾರ್ಮಿಕರ ಯೂನಿಯನ್ ಪ್ರತಿನಿಧಿಗಳುಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT