ಬುಧವಾರ, ಮಾರ್ಚ್ 29, 2023
23 °C

ಕೊಪ್ಪಳ| 7ರಂದು ಜಿಲ್ಲಾ ಮಟ್ಟದ ಚರ್ಚಾ, ಪ್ರಬಂಧ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಫೆ. 7ರಂದು ನಗರದ ತಾಲ್ಲೂಕು ಕ್ರೀಡಾಂಗಣ ಹತ್ತಿರದ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಚರ್ಚಾ ಮತ್ತು ಪ್ರಬಂಧ ಸ್ಪರ್ಧೆ ಜರುಗಲಿದೆ.

ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ  ‘ಸಹಕಾರ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳು, ಸಂಭವನೀಯ ಪರಿಹಾರಗಳು’ ಎಂಬ ವಿಷಯದ ಪ್ರಬಂಧ ಸ್ಪರ್ಧೆ, ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ‘ಸಮೃದ್ಧ ಭಾರತ ನಿರ್ಮಾಣದಲ್ಲಿ ಸಹಕಾರ ಚಳವಳಿ ಮಾತ್ರವೇ ಪ್ರಧಾನ ಪಾತ್ರವನ್ನು ವಹಿಸಬಲ್ಲದು’ ಎನ್ನುವ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಕೊಪ್ಪಳಕ್ಕೆ ಬಂದು ಹೋಗುವ ಬಸ್ ಅಥವಾ ರೈಲು ಪ್ರಯಾಣದರ ಮಾತ್ರ ಜಿಲ್ಲಾ ಸಹಕಾರ ಯೂನಿಯನ್ ಕೊಡಲಾಗುತ್ತದೆ. ಇನ್ನಷ್ಟು ಮಾಹಿತಿಗೆ  8073619532, 9844230935 ಅಥವಾ 9481659528 ಸಂಪರ್ಕಿಸಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು