ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ 18ರಂದು

Last Updated 17 ಸೆಪ್ಟೆಂಬರ್ 2022, 5:26 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲಾ ಖಾಸಗಿ ಹಾಗೂ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟವು (ಕ್ಯಾಮ್ಸ್‌) ಸೆ. 18ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶಿವಶಾಂತವೀರ ಮಂಗಳಭವನದಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಒಕ್ಕೂಟದ ಅಧ್ಯಕ್ಷ ಗಿರೀಶ ಕಣವಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ಕರಡಿ ಸಂಗಣ್ಣ ಉದ್ಘಾಟನೆ ಮಾಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್‌, ಶಾಸಕ ರಾಘವೇಂದ್ರ ಹಿಟ್ನಾಳ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು. ಶಿಕ್ಷಣ ತಜ್ಞ ಟಿ.ವಿ. ಮಾಳಗದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಕ್ಯಾಮ್ಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ. ಶಿಶಕುಮಾರ, ಕೊಪ್ಪಳ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಚಿಲವಾಡಗಿ, ಕಾರ್ಯದರ್ಶಿ ನಿತೀಶ್ ಪುಲಸ್ಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT