ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ | ಕೋರಿದ್ದು ವಿಚ್ಚೇದನ, ಸಿಕ್ಕಿದ್ದು ಹೊಸಬದುಕು

Published : 15 ಸೆಪ್ಟೆಂಬರ್ 2024, 16:23 IST
Last Updated : 15 ಸೆಪ್ಟೆಂಬರ್ 2024, 16:23 IST
ಫಾಲೋ ಮಾಡಿ
Comments

ಕೊಪ್ಪಳ: ಕೆಟ್ಟ ಗಳಿಗೆಯಲ್ಲಿ ಆದ ಮನಸ್ತಾಪದಿಂದಾಗಿ ಬದುಕಿನಿಂದಲೇ ದೂರವಾಗಬೇಕು ಎಂದುಕೊಂಡಿದ್ದ ಆ ಜೋಡಿಗಳಿಗೆ ನ್ಯಾಯಾಲಯದಲ್ಲಿ ಸಿಕ್ಕಿದ್ದು ಹೊಸ ಬದುಕು. ಕೋರಿದ್ದು ವಿಚ್ಚೇದನವಾದರೂ ಸಿಕ್ಕಿದ್ದು ಮರು ಬೆಸುಗೆ. ಹದಿನಾಲ್ಕು ಜೋಡಿಗಳಿಗೆ ನ್ಯಾಯಾಧೀಶರು ಹಾಗೂ ವಕೀಲರು ಮರು ಹೊಂದಾಣಿಕೆ ಮಾಡಿದರು.

ನಗರದಲ್ಲಿ ಶನಿವಾರ ನಡೆದ ರಾಷ್ಟೀಯ ಲೋಕ್ ಅದಾಲತ್‌ನಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರಶೇಖರ ಸಿ. ಮುಂದಾಳತ್ವದಲ್ಲಿ 14 ಜೋಡಿ ವೈ ಮನಸ್ಸು ಮರೆತು ಒಂದಾದರು. ಕೌಟುಂಬಿಕ ಭಿನ್ನಾಭಿಪ್ರಾಯ, ಹಣಕಾಸು ಸಮಸ್ಯೆ, ಕುಡಿತ, ಸೋಮಾರಿತನ, ಅನುಮಾನ ಹೀಗೆ ನಾನಾ ಕಾರಣಕ್ಕೆ ಸಂಸಾರದಲ್ಲಿನ ಸಮಸ್ಯೆಯಿಂದ ವಿಚ್ಛೇಧನ ಕೋರಿ ಅವರೆಲ್ಲರೂ ನ್ಯಾಯಾಲಯದ ಮೆಟ್ಟಿಲು ಏರಿದ್ದರು. 

ವಿಚ್ಛೇನ ಕೋರಿ ಅರ್ಜಿ ಸಲ್ಲಿಸಿದ ಪೈಕಿ ಕೊಪ್ಪಳ ನ್ಯಾಯಾಲಯದಲ್ಲಿ ಐದು ಜೋಡಿ, ಗಂಗಾವತಿ ತಾಲ್ಲೂಕಿನಲ್ಲಿ ಎಂಟು, ಯಲಬುರ್ಗಾ ತಾಲ್ಲೂಕಿನಲ್ಲಿ ಒಂದು ಜೋಡಿ ಒಂದಾದರು. ಇದು ಕಥೆಯಲ್ಲ ಜೀವನ ಎಂದು ನ್ಯಾಯಾಧೀಶರು ಮತ್ತು ವಕೀಲರು ಆ ಜೋಡಿಗಳಿಗೆ ಅರಿವು ಮೂಡಿಸಿದರು. ಎಲ್ಲರ ಸಮ್ಮುಖದಲ್ಲಿ ನ್ಯಾಯಾಲಯಗಳ ಆವರಣದಲ್ಲಿ ಸಾರ್ವಜನಿಕರ ಎದುರಿನಲ್ಲಿ ಹೂವಿನ ಹಾರ ಬದಲಿಸಿಕೊಂಡರು.

ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್ ಪ್ರಕರಣಗಳು, ಜನನ ಮರಣ, ಸಿವಿಲ್ ಕೇಸ್, ಕ್ರಿಮಿನಲ್ ಕೇಸ್, ಮೋಟಾರ್ ವಾಹನ ಅಪಘಾತ ಹೀಗೆ ವಿವಿಧ 4,182 ಪ್ರಕರಣಗಳಲ್ಲಿ 3,328 ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು.

‘ಒಂದೇ ದಿನದಲ್ಲಿ ಒಟ್ಟು 39,583 ಪ್ರಕರಣಗಳ ಪೈಕಿ 35,721 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇವುಗಳ ಒಟ್ಟು ಮೌಲ್ಯ ₹57,79 ಲಕ್ಷ ಇರುತ್ತದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್ ದರಗದ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT