ಕೊಪ್ಪಳ: ‘ಪ್ರಜಾಪ್ರಭುತ್ವದಲ್ಲಿ ನಂಬಿಕೆಯೇ ಇಲ್ಲದ ಡಿ.ಕೆ. ಶಿವಕುಮಾರ್ ವ್ಯಾಪಕ ಭ್ರಷ್ಟಾಚಾರ ಮಾಡಿದ್ದು, ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ. ಅಂಥವರು ಸಿ.ಎಂ. ಆಗಬಾರದು’ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದರು.

‘ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಸಚಿವರಾಗಿದ್ದ ಶಿವಕುಮಾರ್ ಭೂಮಿ ಕಬಳಿಸಿದ್ದಾರೆ. ಭ್ರಷ್ಟಾಚಾರದ ವಿಷಯದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದೇ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುಟುಂಬದವರು ಕೇತನಗಾನಹಳ್ಳಿಯಲ್ಲಿ ಗೋಮಾಳ ಜಮೀನು ಖರೀದಿಸಿದ್ದು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ’ ಎಂದು ಆರೋಪಿಸಿದರು.

‘ಮೂರು ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿಲ್ಲ. ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.