ಸೋಮವಾರ, ಜೂಲೈ 13, 2020
23 °C

ಕೊವೀಡ್: ಶಾಲೆ ತೆರೆಯದಂತೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ರಾಜ್ಯದಲ್ಲಿ ಕೊರೊನಾ ಸೋಂಕಿತರು ದಿನೇ-ದಿನೇ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭ ಮಾಡುವುದು ಸೂಕ್ತವಲ್ಲ. ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿಯದೇ ರಾಜ್ಯ ಸರ್ಕಾರ ಕೊರೊನಾ ಹತೋಟಿಗೆ ಬರುವವರೆಗೂ ಶಾಲೆಗಳನ್ನು ತೆರೆಯಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯು ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆಯ ವ್ಯವಸ್ಥಾಪಕರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಮಾತನಾಡಿ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.‌ ಈ ವೇಳೆ ಸರ್ಕಾರ ಶಾಲೆ ಆರಂಭ ಮಾಡುತ್ತಿರುವುದರಿಂದ ಮಕ್ಕಳಿಗೆ ಅತಿ ವೇಗವಾಗಿ ಸೋಂಕು ತಗುಲುವ ಸಂಭವ ಇದೆ. ಇದರಿಂದ ಮಕ್ಕಳಿಗೆ ತುಂಬಾ ತೊಂದರೆ ಉಂಟಾಗುತ್ತದೆ. ಎಷ್ಟೇ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಸದ್ಯದ ಪರಿಸ್ಥಿಯಲ್ಲಿ ಶಾಲೆ ಆರಂಭದ ವಿಷಯವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಪದಾಧಿಕಾರಿಗಳಾದ ಖಾಜಾವಲಿ, ಶಂಕರ ಪೂಜಾರಿ, ಉಮೇಶ ಬಂಡಿ, ಅಂಜಿನಾಯಕ, ಅಮ್ಜಾದ್‌, ಹುಸೇನ್‌ ಸಾಬ್‌, ಉಮೇಶ್‌, ಅಂಜಿ ಪೂಜಾರಿ, ಭರಮಪ್ಪ ಸೇರಿದಂತೆ ಇನ್ನಿತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.