ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಾವರಗೇರಾ | ರಸ್ತೆಯಲ್ಲಿ ಕಲುಷಿತ ನೀರು: ರೋಗದ ಭೀತಿ

Published 5 ಮಾರ್ಚ್ 2024, 14:02 IST
Last Updated 5 ಮಾರ್ಚ್ 2024, 14:02 IST
ಅಕ್ಷರ ಗಾತ್ರ

ತಾವರಗೇರಾ: ಹುಲಿಯಾಪೂರ ಗ್ರಾಮದ ಶರಣಬಸವೇಶ್ವರ ದೇವಸ್ಥಾನ ಸಂಪರ್ಕ ರಸ್ತೆ, ವಿವಿಧ ಓಣಿಗಳ ರಸ್ತೆಯಲ್ಲಿ ಕಲುಷಿತ ನೀರು ಹರಿಯುತ್ತಿದ್ದು, ಗಬ್ಬು ವಾಸನೆಯಿಂದ ಗ್ರಾಮಸ್ಥರಲ್ಲಿ ರೋಗದ ಭೀತಿ ಹೆಚ್ಚಾಗಿದೆ.

ಈ ಕುರಿತು ಮೆಣೇಧಾಳ ಗ್ರಾ.ಪಂ ಆಡಳಿತಕ್ಕೆ ಮನವಿ ಸಲ್ಲಿಸಿದರೂ ಸಹ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮದ ಶರಣಪ್ಪ ಮರಳಿ ಮತ್ತು ವಿರೇಶ ಆರೋಪಿಸಿದ್ದಾರೆ.

ಗ್ರಾಮದ ಶರಣಬಸವೇಶ್ವರ ದೇವಸ್ಥಾನ ಪುರಾಣ ಕಾರ್ಯಕ್ರಮ ಆರಂಭವಾಗಿದ್ದು, ಮಾ 7 ರಂದು ಗುರುವಾರ ಜಾತ್ರಾ ಮಹೋತ್ಸವ ಮತ್ತು ಮಹಾರಥೋತ್ಸವ ಜರುಗಲಿದೆ. ಮೂಲ ಸೌಕರ್ಯಗಳು, ಸ್ವಚ್ಚತೆ ಮತ್ತು ರಸ್ತೆಯಲ್ಲಿ ವಿದ್ಯುತ್ ಕಂಬಗಳಿಗೆ ಬಲ್ಪ್‌ ವ್ಯವಸ್ಥೆ ಇಲ್ಲ. ಅಲ್ಲಲ್ಲಿ ನೀರು ನಿಂತು ಗಬ್ಬು ವಾಸನೆ ಹೆಚ್ಚಾಗಿದೆ ಎಂದು ದೂರಿದರು.

ಕೂಡಲೇ ಗ್ರಾ.ಪಂ ಆಡಳಿತವು ಈ ಸಮಸ್ಯೆಗೆ ಸ್ಪಂದನೆ ಮಾಡದಿದ್ದರೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ದೂರು ನೀಡಲಾಗುವದು ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT