ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ| ಅಭಿವೃದ್ಧಿ ಕಾಮಗಾರಿಗೆ ಚಾಲನೆ: ರಾಘವೇಂದ್ರ ಹಿಟ್ನಾಳ

Last Updated 29 ಮಾರ್ಚ್ 2023, 5:30 IST
ಅಕ್ಷರ ಗಾತ್ರ

ಕೊಪ್ಪಳ: ನಗರದಲ್ಲಿ ಅಂದಾಜು ₹4.70 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಂಗಳವಾರ ಶಾಸಕ ರಾಘವೇಂದ್ರ ಹಿಟ್ನಾಳ ಉದ್ಘಾಟಿಸಿದರು.

ಜಿಲ್ಲಾ ಪಂಚಾಯಿತಿ ಸಂಪನ್ಮೂಲ ಕೇಂದ್ರ ಕಟ್ಟಡ, ಬಾಬು ಜಗಜೀವನರಾವ್ ಭವನ ಕಟ್ಟಡ, ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಮಹಿಳಾ ವಸತಿ ನಿಲಯ ಕಟ್ಟಡ, ಡಾ.ಬಿ.ಆರ್‌. ಅಂಬೇಡ್ಕರ್ ಮಿನಿಭವನ ಉದ್ಘಾಟನೆ ಮತ್ತು ಬಾಬು ಜಗಜೀವನ್ ರಾವ್ ವೃತ್ತ ನವೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿ ‘ನಮ್ಮ ಪಕ್ಷದ ಸರ್ಕಾರ ಅಧಿಕಾರದಲ್ಲಿ ಇರದಿದ್ದರೂ ಹತ್ತು ವರ್ಷಗಳಲ್ಲಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಶಾಸಕನಾಗಿ ಎರಡು ಅವಧಿಯಲ್ಲಿ ಮಾಡಿದ ಕೆಲಸದ ಬಗ್ಗೆ ಹೆಮ್ಮೆಯಿದೆ’ ಎಂದರು.

ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ್, ಮುಖಂಡರಾದ ಎಸ್.ಬಿ.ನಾಗರಳ್ಳಿ, ಆರ್.ಧರ್ಮಸೇನ, ಗೂಳಪ್ಪ ಹಲಿಗೇರಿ, ಕಾಟನ್ ಪಾಷ, ಅಮ್ಜದ ಪಟೇಲ, ಮುತ್ತುರಾಜ ಕುಷ್ಟಗಿ, ಸಿದ್ದಣ್ಣ ಮ್ಯಾಗೇರಿ, ಗುರು ಹಲಿಗೇರಿ, ಅಕ್ಬರ್ ಪಾಷ ಪಲ್ಟನ್, ಬಸಯ್ಯ ಹಿರೇಮಠ, ಕೆ.ಎಂ ಸೈಯದ್, ಖತೀಬ್ ಬಾಷು, ಎಸ್.ಸಿ ಘಟಕದ ಜಿಲ್ಲಾಧ್ಯಕ್ ಗಾಳೆಪ್ಪ ಪೂಜಾರ, ಶಿವಕುಮಾರ ಶೆಟ್ಟರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT