ಬುಧವಾರ, ಮೇ 12, 2021
27 °C
ನಾಲಾ ಹೂಳೆತ್ತುವ ಕಾಮಗಾರಿಗೆ ಚಾಲನೆ: ಗ್ರಾ.ಪಂ ಅಧ್ಯಕ್ಷ ರೇವಣಸಿದ್ದನಗೌಡ ಪೊಲೀಸ್ ಪಾಟೀಲ ಹೇಳಿಕೆ

‘ದುಡಿಯೋಣ ಬಾ’ ಸದುಪಯೋಗ ಪಡೆಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಿರೇಬಿಡನಾಳ (ಕುಕುನೂರು): ‘ನರೇಗಾ ಯೋಜನೆ ಅಡಿ ಗ್ರಾಮೀಣರಿಗೆ ನಿರಂತರವಾಗಿ ಕೆಲಸ ಒದಗಿಸುವ ಸಲುವಾಗಿ ‘ದುಡಿಯೋಣ ಬಾ’ ಅಭಿಯಾನ ಆರಂಭಿಸಲಾಗಿದೆ. ಇದರ ಸದುಪಯೋಗ ಪಡೆಯಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ರೇವಣಸಿದ್ದನಗೌಡ ಪೊಲೀಸ್ ಪಾಟೀಲ ಮನವಿ ಮಾಡಿದರು.

ತಾಲ್ಲೂಕಿನ ಹಿರೇಬಿಡನಾಳ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ‘ದುಡಿಯೋಣ ಬಾ’ ಅಭಿಯಾನದ ಪ್ರಯುಕ್ತ ಕೈಗೆತ್ತಿಕೊಳ್ಳಲಾಗಿರುವ ನಾಲಾ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಮಾತನಾಡಿ,‘ನರೇಗಾ ಯೋಜನೆಯಿಂದ ಹೊರಗುಳಿದ ಕುಟುಂಬಗಳನ್ನು ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವುದು ಅಭಿಯಾನದ ಉದ್ದೇಶ. ಪ್ರತಿದಿನಕ್ಕೆ ₹ 289 ಕೂಲಿ ಸಿಗಲಿದೆ‌. ಕೆಲಸಕ್ಕೆ ತಕ್ಕ ಕೂಲಿ ದೊರೆಯಲಿದೆ’ ಎಂದು ಹೇಳಿದರು.

ಉಪಾಧ್ಯಕ್ಷೆ ಕನಕವ್ವ, ಪಿಡಿಒ ದೊಡ್ಡಬಸಮ್ಮ, ದೇವಿಂದ್ರಪ್ಪ ಹಾಗೂ ಯಮನೂರಪ್ಪ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.