ವರ್ಷದೊಳಗೆ ಹೊಸ ಪೊಲೀಸ್ ಕಚೇರಿ: ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ

ಕುಷ್ಟಗಿ: ‘ಪಟ್ಟಣದಲ್ಲಿ ಹೊಸ ಮಾದರಿಯಲ್ಲಿ ನಿರ್ಮಾಣಗೊಳ್ಳಲಿರುವ ಪೊಲೀಸ್ ಕಚೇರಿ ಕಟ್ಟಡ ಕಾಮಗಾರಿ ಆರಂಭಗೊಂಡ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ’ ಎಂದು ಗಂಗಾವತಿ ಉಪ ವಿಭಾಗದ ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಹೇಳಿದರು.
ಭಾನುವಾರ ಇಲ್ಲಿ ಹೊಸ ಕಟ್ಟಡ ನಿರ್ಮಾಣಗೊ ಳ್ಳಲಿರುವುದರಿಂದ ತಾತ್ಕಾಲಿಕ ಸಿಪಿಐ ಕಚೇರಿ ಉದ್ಘಾಟನೆ ವೇಳೆ ಮಾತನಾಡಿದ ಅವರು,‘ಹೊಸ ಕಟ್ಟಡ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭಗೊಳ್ಳಲಿದೆ. ಪೊಲೀಸ್ ಠಾಣೆ, ಸರ್ಕಲ್ ಇನ್‌ಸ್ಪೆಕ್ಟರ್ ಕಚೇರಿ ಹಾಗೂ ಸಭಾಂಗಣಗಳನ್ನು ಒಳಗೊಳ್ಳಲಿದೆ. ಇದರಿಂದ ಎಲ್ಲ ಸಿಬ್ಬಂದಿ ಒಂದೇ ಕಡೆ ಕಾರ್ಯನಿರ್ವಹಿಸುವುದಕ್ಕೆ ಅನುಕೂಲವಾಗುತ್ತದೆ’ ಎಂದು ಅವರು ಹೇಳಿದರು.
ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ ತಾತ್ಕಾಲಿಕ ಕಟ್ಟಡ ಉದ್ಘಾಟಿಸಿದರು.
ಸರ್ಕಲ್ ಇನ್‌ಸ್ಪೆಕ್ಟರ್ ಎನ್.ಆರ್.ನಿಂಗಪ್ಪ, ಸಬ್ ಇನ್‌ಸ್ಪೆಕ್ಟರ್ ತಿಮ್ಮಣ್ಣ ನಾಯಕ, ವೈಶಾಲಿ ಝಳಕಿ ಮತ್ತು ಪೊಲೀಸ್ ಸಿಬ್ಬಂದಿ, ಪುರಸಭೆಯ ಅನೇಕ ಸದಸ್ಯರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಾರಂಭದಲ್ಲಿ ಹೊಸ ಕಟ್ಟಡದಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿ–ವಿಧಾನಗಳು ನೆರವೇರಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.