ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತ್ಯ ಪೌಷ್ಟಿಕ ಆಹಾರ ಸೇವಿಸಿ: ಕ್ಷಯರೋಗ ಆರೋಗ್ಯ ಪರಿವೀಕ್ಷಕ ಮಲ್ಲಿಕಾರ್ಜುನ

Last Updated 7 ಸೆಪ್ಟೆಂಬರ್ 2021, 12:31 IST
ಅಕ್ಷರ ಗಾತ್ರ

ಗಂಗಾವತಿ: ‘ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯದತ್ತ ಗಮನ ಹರಿಸಬೇಕು‘ ಎಂದು ಕ್ಷಯರೋಗ ಆರೋಗ್ಯ ಪರಿವೀಕ್ಷಕ ಮಲ್ಲಿಕಾರ್ಜುನ ತಿಳಿಸಿದರು.

ನಗರದ ತರಕಾರಿ ಮಾರುಕಟ್ಟೆಯ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ನಡೆದ ಮಹಿಳೆಯರ ಪೌಷ್ಟಿಕ ಆಹಾರ ಶಿಬಿರದಲ್ಲಿ ಮಾತನಾಡಿದರು.

‘ಪೌಷ್ಟಿಕ ಆಹಾರ ಸೇವನೆ ಮಾಡದಿದ್ದರೆ ಹುಟ್ಟುವ ಮಗುವಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಗರ್ಭಿಣಿಯರು ಪೌಷ್ಟಿಕ ಅಂಶಗಳಿಂದ ಕೂಡಿರುವ ತರಕಾರಿ, ಹಣ್ಣುಗಳನ್ನು ನಿತ್ಯ ಸೇವಿಸಬೇಕು‘ ಎಂದರು.

‘ಕ್ಷಯರೋಗ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ರೋಗವಾಗಿದೆ. ಆದ್ದರಿಂದ ಮಹಿಳೆಯರಲ್ಲಿ ಎದೆ ನೋವು, ತೂಕ ಕಡಿಮೆಯಾಗುವುದು, ಕಫದಲ್ಲಿ ರಕ್ತ ಬೀಳುವುದು, ನಿರಂತರ ಕೆಮ್ಮು, ಜ್ವರದಿಂದ ಬಳಲುತ್ತಿದ್ದರೆ ಕೂಡಲೇ ತಪಾಸಣೆ ಮಾಡಿಸಿಕೊಳ್ಳಬೇಕು‘ ಎಂದರು.

ಮಹಿಳಾ ಮತ್ತು ಮಕ್ಕಳ ಇಲಾಖೆ ಅಂಗನವಾಡಿ ಮೇಲ್ವಿಚಾರಕರ ಶಹಿನ್ ಮಾತನಾಡಿದರು.

ಕರ್ನಾಟಕ ಆರೋಗ್ಯ ಸಂವರ್ಧನ ಸಂಸ್ಥೆಯ ಸಂಯೋಜಕಿ ಕಾಶಿಂ ಬಿ, ಅಂಗನವಾಡಿ ಕಾರ್ಯಕರ್ತೆ ಅಮೀನಾ, ಕಾವೇರಿ, ಅನ್ನಪೂರ್ಣ ಸೇರಿದಂತೆ ಗರ್ಭಿಣಿಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT