ಸೋಮವಾರ, ಫೆಬ್ರವರಿ 24, 2020
19 °C
ವಾರ್ಷಿಕೋತ್ಸವ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ ಸಲಹೆ

ಮೌಲ್ಯಾಧಾರಿತ ಶಿಕ್ಷಣ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಅಂಕಗಳನ್ನು ಬೆನ್ನಟ್ಟಿ ಶಿಕ್ಷಣ ನೀಡಲಾಗುತ್ತಿದ್ದು, ಇದರಿಂದ ನಿಜವಾಗಿಯೂ ಶಿಕ್ಷಣ ಗುಣಮಟ್ಟ ಕುಸಿಯುತ್ತದೆ ಎನ್ನುವ ಆತಂಕ ಎದುರಾಗುತ್ತಿದೆ. ಹಾಗಾಗಿ ಗುಣಮಟ್ಟ ಮತ್ತು ಮೌಲ್ಯಾಧಾರಿತ ಶಿಕ್ಷಣ ನೀಡುವ ಅಗತ್ಯವಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ ಹೇಳಿದರು.

ನಗರದ ಕಿನ್ನಾಳ ರಸ್ತೆಯಲ್ಲಿ ಇರುವ ಎಜುಕೇರ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಈಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವರ್ಧಾತ್ಮಕ ಯುಗದಲ್ಲಿ ಅಂಕಗಳು ಬೇಕೇಬೇಕು. ಆದರೆ ಅದು ಪ್ರಧಾನ ವಾಗುವುದರಿಂದ ಮಕ್ಕಳಲ್ಲಿ ಇರುವ ಪ್ರತಿಭೆ ಕಮರಿ ಹೋಗಬಹುದು. ಆದ್ದರಿಂದ ಮಕ್ಕಳು ಮುಕ್ತ ಮನಸ್ಸಿನಿಂದ ಕಲಿಯುವಂತೆ ಆಗಬೇಕೆ ವಿನಃ ಒತ್ತಾಯ ಪೂರ್ವಕ ಕಲಿಕೆಯಾಗಬಾರದು. ಮಕ್ಕಳಲ್ಲಿ ಪ್ರತಿಭೆ ಇದ್ದೇ ಇರುತ್ತದೆ. ಆದರೆ, ಹೆಚ್ಚು ಅಂಕಗಗಳನ್ನು ಬೆನ್ನಟ್ಟುವ ಭರದಲ್ಲಿ ಪ್ರತಿಭೆ ಬಾಡಿ ಹೋಗಬಾರದು. ಹೀಗಾಗಿ, ಶಿಕ್ಷಣ ಸಂಸ್ಥೆಗಳ ಹೆಚ್ಚು ಅಂಕ ಪಡೆಯುವುದಕ್ಕೆ ನೀಡುವಷ್ಟು ಪ್ರಾಮುಖ್ಯತೆಯನ್ನು ಮೌಲ್ಯಾಧಾರಿತ ಶಿಕ್ಷಣ ನೀಡುವುದಕ್ಕೂ ನೀಡಬೇಕು ಎಂದರು.

ಅನುದಾನರಹಿತ ಶಾಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರಲ್ಹಾದ್‌ ಅಗಳಿ ಮಾತನಾಡಿ, ಮಕ್ಕಳ ಉತ್ತಮ ಶಿಕ್ಷಣಕ್ಕೆ ಕೇವಲ ಶಾಲೆಯಲ್ಲಿ ಮಾಡುವ ಪಾಠ ಸಾಲದು. ಮನೆಯಲ್ಲಿ ಸೂಕ್ತ ವಾತಾವರಣ ಕಲ್ಪಿಸಬೇಕು.  ಮಕ್ಕಳಿಗೆ ಪ್ರೋತ್ಸಾಹ ಸಿಕ್ಕಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.

ಎಜುಕೇರ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಶ್ರೀನಿವಾಸ ಹ್ಯಾಟಿ ಮಾತನಾಡಿ, ಮಕ್ಕಳ ಶಿಕ್ಷಣ ಮಟ್ಟ ಸುಧಾರಣೆಗೆ ಶಿಕ್ಷಕರ ಜತೆ ಪಾಲಕರು ಕೈಜೋಡಿಸಬೇಕು. ಎಜುಕೇರ್‌ ಆಂಗ್ಲಮಾಧ್ಯಮ ಶಾಲೆ ಉತ್ತಮ ಬೆಳವಣಿಗೆ ಕಾಣುತ್ತಿದೆ ಎಂದರು.

ಕಾಯಕ ಎಜುಕೇಶನ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಾ ಪಾಟೀಲ, ಖಜಾಂಚಿ ಶುಶಾಂಗಿ ಅವರಾದಿ ಇದ್ದರು.

ಗಿರೀಜಾಪತಿ ವಾರ್ಷಿಕ ವರದಿ ವಾಚಿಸಿದರು. ಶಿಕ್ಷಕಿರಾದ ಪ್ರೇಮಾ ಪಟ್ಟಣಶೆಟ್ಟಿ, ಸವಿತಾ ನಿರೂಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)