ಬುಧವಾರ, ಆಗಸ್ಟ್ 4, 2021
20 °C

ಋತುಚಕ್ರ ನೈರ್ಮಲ್ಯ ದಿನ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ಮಹಿಳೆಯರಲ್ಲಿ ಋತುಚಕ್ರವು ಸಹಜ ಪ್ರಕ್ರಿಯೆ. ಅದಿಲ್ಲದೇ ಮಾನವ ಸಂತತಿ ಮುಂದುವರೆಯಲಾರದು. ಋತುಚಕ್ರದ ಬಗ್ಗೆ ಜನರಲ್ಲಿ ಇರುವ ಮೂಢನಂಬಿಕೆ ಹಾಗೂ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು ಎಂದು ಸ್ವಚ್ಛ‌ ಭಾರತ್ ಮಿಷನ್‌ ಗ್ರಾಮೀಣ ಸಲಹೆಗಾರ್ತಿ ಬಸಮ್ಮ ಹೇಳಿದರು.

ತಾಲ್ಲೂಕಿನ ಬಸಾಪಟ್ಟಣದಲ್ಲಿ ಗ್ರಾಮ ಪಂಚಾಯಿತಿಯ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳಾ ಕೂಲಿಕಾರರಿಗೆ ಸುರಕ್ಷಿತ ಋತುಚಕ್ರ ನಿರ್ವಹಣೆ ಬಗ್ಗೆ ಅವರು ಮಾಹಿತಿ ನೀಡಿದರು.

ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮುಟ್ಟಿನ ನೈರ್ಮಲ್ಯ ನಿರ್ವಹಣೆಯಲ್ಲಿ ಇಂದಿಗೂ ಹಳೆಯ ಕ್ರಮಗಳನ್ನೇ ಅನುಸರಿಸುತ್ತಿದ್ದು, ಅನೇಕ ರೀತಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಮೌಢ್ಯಗಳನ್ನು ದೂರ ಮಾಡುವುದರೊಂದಿಗೆ ಮಹಿಳೆಯರನ್ನು ಮಾನಸಿಕವಾಗಿ ಸದೃಢರನ್ನಾಗಿಸುವ ಉದ್ದೇಶದಿಂದ ಈ ವಿಶ್ವ ಋತುಚಕ್ರ ನೈರ್ಮಲ್ಯ ದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.

 ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಮೋಹನ್‌, ಗ್ರಾಮ ಪಂಚಾಯಿತಿ ಪಿಡಿಒ ಇಂದಿರಾ ಹಾಗೂ ಕೂಲಿಕಾರ ಮಹಿಳೆಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.