ಮಂಗಳವಾರ, ನವೆಂಬರ್ 24, 2020
26 °C

ಅಧಿಕಾರಿಗಳಿಗೆ ಚುನಾವಣಾ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ತಾಲ್ಲೂಕು ಆಡಳಿತದ ವತಿಯಿಂದ ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.

ಈ ವೇಳೆ ತಹಶೀಲ್ದಾರ್‌ ಎಂ.ರೇಣುಕಾ ಮಾತನಾಡಿ‘ಎಲ್ಲಾ ಅಧಿಕಾರಿಗಳು ಚುನಾವಣೆಯ ಕುರಿತು ಸರಿಯಾದ ತರಬೇತಿ ಪಡೆದುಕೊಳ್ಳಬೇಕು. ಯಾವುದೇ ಗೊಂದಲಗಳು ಇದ್ದರೆ, ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಿ, ಈ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಎಲ್ಲಾ ಅಧಿಕಾರಿಗಳಿಗೆ ವಿಡಿಯೊ ಮೂಲಕ ಚುನಾವಣಾಧಿಕಾರಿಗಳು ಮಾಹಿತಿ ನೀಡಿದರು.

ಈ ವೇಳೆ ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ, ಮಹೇಶ ದಲಾಲ್‌ ಹಾಗೂ ವಿವಿಧ ಶಾಲೆಗಳ ಶಿಕ್ಷಕರು
ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.