ಕೊಪ್ಪಳ: ನಗರದಲ್ಲಿ ಅಂದಾಜು ₹9.84 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಶಾಸಕ ರಾಘವೇಂದ್ರ ಹಿಟ್ನಾಳ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿ ‘ನಗರವನ್ನು ಸುಂದರ, ಸುಸಜ್ಜಿತವನ್ನಾಗಿ ಮಾಡುವ ದೂರದೃಷ್ಟಿ ಹೊಂದಿದ್ದು, ಹಂತ ಹಂತವಾಗಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ನಗರದ ಅಭಿವೃದ್ಧಿಗೆ ಆದ್ಯತೆ ನೀಡಲು ಕೊಳೆಗೇರಿ ಮಂಡಳಿಯಿಂದಲೂ ಅನುದಾನ ತರುವ ಕೆಲಸ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.

‘ಕೊಪ್ಪಳದಲ್ಲಿ ಎರಡ್ಮೂರು ದಿನಗಳಿಗೊಮ್ಮೆ ಕುಡಿಯುವ ನೀರು ಬರುತ್ತಿದ್ದು 24×7 ಕುಡಿಯುವ ನೀರು ಒದಗಿಸುವ ಕಾಮಗಾರಿ ವೇಗವಾಗಿ ನಡೆಯುತ್ತದೆ. ಮುಂಬರುವ ದಿನಗಳಲ್ಲಿ ನಿತ್ಯ ನೀರು ಒದಗಿಸಲು ಪ್ರಯತ್ನ ನಡೆಯುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಪ್ರತಿ ವಾರ್ಡ್ಗೆ ₹25ರಿಂದ ₹30 ಲಕ್ಷ ಅನುದಾನ ನೀಡಲಾಗುತ್ತದೆ’ ಎಂದು ತಿಳಿಸಿದರು.

ಸಂಸದ ಕೆ. ರಾಜಶೇಖರ ಹಿಟ್ನಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷಾ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಉಪಾಧ್ಯಕ್ಷೆ ಅಶ್ವಿನಿ ಗದುಗಿನಮಠ, ಸದಸ್ಯರು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.