ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಕ್ ಡ್ಯಾಂ ಹಗರಣ: ಜಿ.ಪಂ. ಕಿರಿಯ ಎಂಜಿನಿಯರ್ ಬಂಧನ

Last Updated 16 ಫೆಬ್ರುವರಿ 2021, 3:52 IST
ಅಕ್ಷರ ಗಾತ್ರ

ಕುಷ್ಟಗಿ: ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಬಹು ಕಮಾನು ಚೆಕ್ ಡ್ಯಾಂನ ಕೋಟ್ಯಂತರ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಜಿಲ್ಲಾ ಪಂಚಾಯಿತಿ ಉಪ ವಿಭಾಗದ ಕಿರಿಯ ಎಂಜಿನಿಯರ್ ಇಲಿಯಾಸ್ ಎಂಬುವವರನ್ನು ಸೋಮವಾರ ರಾತ್ರಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಿರಿಯ ಎಂಜಿನಿಯರ್ ಎಂ. ಇಲಿಯಾಸ್ ಸೇರಿ ಸಹಾಯಕ ಎಂಜಿನಿಯರ್ ಅಜಿತ್ ದಳವಾಯಿ, ಕಿರಿಯ ಎಂಜಿನಿಯರ್ ಕವಿತಾ, ರಿಜ್ವಾನ್, ಆಶ್ವಿನಿ, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಗಳಾದ ಶಂಕರ್ ಮಳಗಿ, ಶಿವಾನಂದ ನಾಗೋಡ್ ಎಂಬುವವರ ವಿರುದ್ಧ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ.ತಿಮ್ಮಪ್ಪ ದೂರು ನೀಡಿದ್ದಾರೆ. ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಗರಣವನ್ನು ಪ್ರಜಾವಾಣಿ ಬಯಲಿಗೆ ತಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT