‘ಕನ್ನಡ ಭಾಷೆ ಉಳಿಸಿ ಬೆಳೆಸಿ’

ಕುಕನೂರು: ಕರ್ನಾಟಕ ರಾಜ್ಯದಲ್ಲಿ ಅನ್ಯ ಭಾಷೆಗಳ ಹಾವಳಿ ಅಧಿಕವಾಗಿದೆ. ನಾವೆಲ್ಲರೂ ಮಾತೃಭಾಷೆ ಭಾಷೆಯನ್ನು ಉಳಿಸಿ, ಬೆಳೆಸಬೇಕಿದೆ ಎಂದು ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ಹೇಳಿದರು ಹೇಳಿದರು.
ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅದರಲ್ಲೂ ಉತ್ತರ ಕರ್ನಾಟಕದ ಕನ್ನಡ ಭಾಷೆಗೆ ಅದರದ್ದೇ ಆದ ಗತ್ತು-ಗಮ್ಮತ್ತಿದೆ. ಆ ಸೊಗಡನ್ನು ನಮ್ಮ ಜೀವನದುದ್ದಕ್ಕೂ ಬಳಸೋಣ ಎಂದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಬೆಲ್ಲದ್, ಬಿಆರ್‌ಸಿ ಶರಣಪ್ಪ ಕೊಪ್ಪದ, ಗ್ರೇಡ್-2 ತಹಶೀಲ್ದಾರ್ ಗವಿಸಿದ್ದಪ್ಪ, ಅಲ್ಲಾಭಕ್ಷಿ ಕಲ್ಲೂರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.