ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕನೂರು: ಶಿಕ್ಷಕರಿಗೆ ಇಂಗ್ಲಿಷ್‌ ಭಾಷಾ ಕಾರ್ಯಾಗಾರ

Last Updated 20 ಡಿಸೆಂಬರ್ 2021, 12:36 IST
ಅಕ್ಷರ ಗಾತ್ರ

ಕುಕನೂರು: ‘ಇಂಗ್ಲಿಷ್ ಭಾಷೆ ಕಠಿಣವಲ್ಲ. ಶಿಕ್ಷಕರು ಹೆಚ್ಚಿನ ಆಸಕ್ತಿವಹಿಸಿ ಬೋಧಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇಲ್ಲಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಪ್ರೌಢ ಶಾಲಾ ಇಂಗ್ಲಿಷ್ ಭಾಷಾ ಶಿಕ್ಷಕರ ಕಾರ್ಯಾಗಾರದಲ್ಲಿ ಮಾತನಾಡಿ,‘ಗ್ರಾಮೀಣ ಭಾಗದಲ್ಲಿ ಇಂಗ್ಲಿಷ್ ಕಷ್ಟ ಎನ್ನುವ ಪೂರ್ವಗ್ರಹ ಇದೆ. ಅದೇ ರೀತಿ ಶೇ 80ರಷ್ಟು ಇಂಗ್ಲಿಷ್‌ ಭಾಷೆ ಬೆಳವಣಿಗೆಯಾಗುತ್ತಿಲ್ಲ. ಶಿಕ್ಷಕರು ತಮ್ಮ ಬೋಧನಾ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು’ ಎಂದರು.

ಚರ್ಚೆ, ಸಂವಾದ ಕಾರ್ಯಾಗಾರಗಳನ್ನು ನಡೆಸುವುದರಿಂದ ಲೋಪ–ದೋಷಗಳನ್ನು ಸರಿಪಡಿಸಬಹುದು ಎಂದರು.

ಮುಖ್ಯ ಶಿಕ್ಷಕ ಮುತ್ತಣ್ಣ ಎಚ್ ಮಾತನಾಡಿ,‘ಇಂಗ್ಲಿಷ್‌ ಭಾಷೆಗೆ ವಿಶ್ವದೆಲ್ಲೆಡೆ ಮನ್ನಣೆ ಇದ್ದು, ಇದಕ್ಕಾಗಿ ಮಕ್ಕಳು ಕೂಡ ಇಂಗ್ಲಿಷ್‌ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಆದರೆ ಇಂಗ್ಲಿಷ್‌ ಕಲಿತೆ ಎನ್ನುವ ಕಾರಣಕ್ಕೆ ಕನ್ನಡತನವನ್ನೂ ಬಿಟ್ಟು ಕೊಡಬಾರದು. ಶಾಲೆಯಲ್ಲಿ ಮಕ್ಕಳು ಇಂಗ್ಲಿಷ್‌ ಕಲಿಕೆಗೆ ಒತ್ತು ನೀಡಬೇಕು. ಮಕ್ಕಳಲ್ಲಿ ಇಂಗ್ಲಿಷ್ ಭಾಷಾ ಜ್ಞಾನ ಹೆಚ್ಚಾದರೆ ಎಂಥ ವಿಷಯವನ್ನೂ ಸರಳವಾಗಿ ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ‌ ಬೆಳೆಸಿಕೊಳ್ಳುತ್ತಾರೆ’ ಎಂದರು.

ವಿ.ಎಸ್.ಬೆಣಕಲ್, ಸುರೇಶ ಅಬ್ಬಿಗೇರಿ, ಶರಣಪ್ಪ ಕುಂಬಾರ, ದೇವಪ್ಪ ಮುಗಳಿ ಹಾಗೂ ಮಂಜುಳಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT