ಭಾನುವಾರ, ಜನವರಿ 16, 2022
28 °C

ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು: ಜಿ.ಯು. ಹುಡೇದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಬುರ್ಗಾ: ಸ್ವಯಂ ಉದ್ಯೋಗ ಕೈಗೊಳ್ಳಲು ಹಾಗೂ ಉದ್ಯಮಶೀಲರಾಗಲು ಬೇಕಾದ ಜ್ಞಾನದ ಜೊತೆಗೆ ಸೂಕ್ತ ಮಾರ್ಗದರ್ಶನ ನೀಡುವ ಸಿಡಾಕ್ ಸಂಸ್ಥೆಯ ಜಾಗೃತಿ ಕಾರ್ಯಕ್ರಮಗಳು ಹೆಚ್ಚು ಪರಿಣಾಮಕಾರಿಯಾಗಿವೆ ಎಂದು ಸಂಸ್ಥೆಯ ಜಂಟಿ ನಿರ್ದೇಶಕ ಜಿ.ಯು. ಹುಡೇದ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕೌಶಲಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಉದ್ಯಮಶೀಲತಾ ತಿಳಿವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಈ ಸಂಸ್ಥೆ ನೀಡಿದ ತರಬೇತಿ ಯೊಂದಿದವರು ಸಾಕಷ್ಟು ಸಂಖ್ಯೆಯಲ್ಲಿ ಸ್ವಯಂ ಉದ್ಯೋಗ ಕಂಡುಕೊಂಡಿದ್ದಾರೆ. ಅಲ್ಲದೇ ಸಾಕಷ್ಟು ಸಂಖ್ಯೆಯ ಜನರಿಗೆ ಉದ್ಯೋಗ ಕೊಟ್ಟಿದ್ದಾರೆ. ಇಂತಹ ಸಾಧಕರ ಸಾಲಿನಲ್ಲಿ ಯುವ ಪದವೀಧರರು ಸೇರುವಲ್ಲಿ ಆಸಕ್ತಿ ತೋರಬೇಕಾಗಿದೆ‘ ಎಂದರು.

‘ಉದ್ಯಮಿಗಳಾಗಬೇಕಾದರೆ ಪದವಿ ಬೇಕಿಲ್ಲ. ಸರಿಯಾದ ಜ್ಞಾನ ಮತ್ತು ತರಬೇತಿ, ಇಚ್ಛಾಶಕ್ತಿ ಹಾಗೂ ಸಮಯ ಪ್ರಜ್ಞೆ ಇವುಗಳು ಅವಶ್ಯವಾಗಿ ಬೇಕಾಗುತ್ತದೆ. ಸರ್ಕಾರಿ ಉದ್ಯೋಗಕ್ಕಾಗಿ ಕಾಯದೇ ಸ್ವಯಂ ಉದ್ಯೋಗದತ್ತ ಯುವಕರು ಮನಸ್ಸು ಮಾಡಬೇಕು‘ ಎಂದು ಸಲಹೆ ನೀಡಿದರು.

ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ ಮಾತನಾಡಿ, ‘ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸ್ವಾವಲಂಬಿ ಜೀವನ ನಡೆಸಲು ಬೇಕಾದ ಕೌಶಲಗಳ ಬಗ್ಗೆ ಉತ್ತಮ ಮಾರ್ಗದರ್ಶನ ಸಿಗಲಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು‘ ಎಂದರು.

ಸಹಾಯಕ ಪ್ರಾಧ್ಯಾಪಕ ಎಚ್.ಎನ್.ಗುಡಿಹಿಂದಿನ, ಐಕ್ಯೂಎಸಿ ಸಂಚಾಲಕ ಎ.ಬಿ.ಕೆಂಚರಡ್ಡಿ ಮಾತನಾಡಿದರು.

ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಜಗದೀಶ ಯಲಿಗಾರ, ಆರ್ಥಿಕ ಸಾಕ್ಷರತೆಯ ಆಪ್ತಸಮಾಲೋಚಕ ರೇವಣರಾಧ್ಯ, ಅಕ್ಷತಾ ಗೋಟೂರ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ಉಪನ್ಯಾಸಕರಾದ ವೈ.ಬಿ.ಅಂಗಡಿ, ವಿನೋದ ಇದ್ದರು. ವಿರೇಶ ಗಜೇಂದ್ರಗಡ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು