ಶನಿವಾರ, ಜೂಲೈ 11, 2020
25 °C

‘ಪರಿಸರ ಸಂರಕ್ಷಣೆ ನಿರಂತರವಾಗಿರಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಕನೂರು: ‘ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಪರಿಸರ ಸಂರಕ್ಷಣೆಯ ಪ್ರಕ್ರಿಯೆ ನಿರಂತರವಾಗಿರಬೇಕು‘ ಎಂದು ಆಡಳಿತ ವೈದ್ಯಾಧಿಕಾರಿ ಡಾ. ಸೀಮಾ ಮಾಬಳೆ ಹೇಳಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಸಸಿ ನಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪರಿಸರ ಸಮತೋಲನ ಕಾಯ್ದುಕೊಳ್ಳಲು ಅರಣ್ಯ ಸಹಕಾರಿ. ಪರಿಸರದ ಅಗತ್ಯತೆ, ಕಾಳಜಿ, ಅರಿವು ಹೊಂದಿರುವುದರ ಜತೆಗೆ, ಪರಿಸರಕ್ಕೆ ನೀಡುತ್ತಿರುವ ಕೊಡುಗೆ ಏನು ಎಂಬುದನ್ನು ಮನವರಿಕೆ ಮಾಡಿಕೊಂಡು ಅದರ ಉಳಿವಿಗಾಗಿ ಜಾಗೃತರಾಗಬೇಕು’ ಎಂದರು.

ಪ್ರತಿಯೊಬ್ಬರೂ ಗಿಡವನ್ನು ನೆಟ್ಟು, ಅವುಗಳನ್ನು ಉಳಿಸಿ ಬೆಳೆಸಲು ಸಂಕಲ್ಪ ಮಾಡಬೇಕು. ಶಿಕ್ಷಕರು ದಿನಕ್ಕೆ ಐದು ನಿಮಿಷವಾದರೂ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಬೇಕು. ಪೋಷಕರು ಸಹ ತಮ್ಮ ಮಕ್ಕಳನ್ನು ಬೆಳೆಸುವ ರೀತಿಯಲ್ಲಿಯೇ ತಮ್ಮ ಸುತ್ತಮುತ್ತಲಿನ ವಾತಾವರಣದಲ್ಲಿ ಗಿಡ ಮರಗಳನ್ನು ನೆಟ್ಟು ಪೋಷಿಸಬೇಕು ಎಂದು ಕರೆ ನೀಡಿದರು.

ಡಾ. ನಾಗೇಂದ್ರ, ಡಾ. ಪ್ರವೀಣ, ಡಾ. ಪ್ರೀಯಾಂಕ ಕಂಪ್ಲಿ, ಹಿರಿಯ ಆರೋಗ್ಯ ಸಹಾಯಕ ಚನ್ನಬಸಯ್ಯ ಸರಗಣಾಚಾರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.