ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಲ್ಲರಿಗೂ ಸಮಾನ ಅವಕಾಶ’

Last Updated 28 ನವೆಂಬರ್ 2019, 9:57 IST
ಅಕ್ಷರ ಗಾತ್ರ

ಕೊಪ್ಪಳ: ದೇಶದ ಸಂವಿಧಾನ ವಿಶ್ವದಲ್ಲೇ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದು ಸಿ.ಪಿ.ಎಸ್ ಶಾಲೆಯ ಮುಖ್ಯಶಿಕ್ಷಕ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು.

ನಗರದ ಸಿ.ಪಿ.ಎಸ್ ಶಾಲೆಯಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1949ರ ನ. 26ರಂದು ಸಂವಿಧಾನ ಅಂಗೀರಕಾರವಾದ ದಿನದ ನೆನಪಿಗಾಗಿ ಸಂವಿಧಾನ ದಿನ ಆಚರಿಸಲಾಗುತ್ತದೆ. ಸಂವಿಧಾನದ ರಚನೆಗೆ 2 ವರ್ಷ 11 ತಿಂಗಳು 17 ದಿನ ತಜ್ಞರು ಶ್ರಮಿವಹಿಸಿದ್ದಾರೆ ಎಂದರು.

ಡಾ.ಬಾಬು ರಾಜೇಂದ್ರ ಪ್ರಸಾದ ಸಂವಿಧಾನ ರಚನಾ ಸಭೆಯ ಸಮಿಯ ಅಧ್ಯಕ್ಷರಾಗಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಕರಡು ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಭಾರತದ ಸಂವಿಧಾನ ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶ ನೀಡಿದೆ ಎಂದರು.

ಶಿಕ್ಷಕ ಗುರುರಾಜ ಕಟ್ಟಿ ಮಾತನಾಡಿ, ಭಾರತ ಸಂವಿಧಾನ ದಿನದ ಅಂಗವಾಗಿ ಮಕ್ಕಳಿಗೆ ಅದರ ಬಗ್ಗೆ ಉಪನ್ಯಾಸ ಏರ್ಪಡಿಸಬೇಕು. ಜತೆಗೆ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಬೇಕು. ಆಗ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ಹೇಳಿದರು.

ಶಿಕ್ಷಕರಾದ ನಾಗಪ್ಪ ನರಿ, ಶಂಕ್ರಮ್ಮ ಬಂಗಾರಶೆಟ್ಟರ್, ಗಂಗಮ್ಮ, ಶೀಲಾ ಬಂಡಿ, ಜಯಶ್ರೀ ದೇಸಾಯಿ, ಭಾರತಿ ಕೊಡ್ಲಿ, ಗೌಸೀಯಾಬೇಗಂ, ರತ್ನಾ, ಮೋಹಿನಪಾಷಾಬೀ ಅವರು
ಇದ್ದರು.

ಬಿ.ಇಡಿ ಪ್ರಶಿಕ್ಷಣಾರ್ಥಿ ಭಾಗ್ಯಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಬಿ.ಇಡಿ ಪ್ರಶಿಕ್ಷಣಾರ್ಥಿ ಅಕ್ಕಮಹಾದೇವಿ ಸ್ವಾಗತಿಸಿ, ಸುರೈಯಾಬೇಗಂ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT