ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾರೋಗ್ಯದಿಂದ ಮಾಜಿ ಶಾಸಕ ಈಶಣ್ಣ ಗುಳಗಣ್ಣವರ ನಿಧನ

Last Updated 17 ಏಪ್ರಿಲ್ 2022, 4:17 IST
ಅಕ್ಷರ ಗಾತ್ರ

ಕುಕನೂರು (ಕೊಪ್ಪಳ ಜಿಲ್ಲೆ): ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಈಶಣ್ಣಗುಳಗಣ್ಣವರ (69)ಶನಿವಾರ ಅನಾರೋಗ್ಯದಿಂದ ನಿಧನರಾದರು.

ಕುಕನೂರು ತಾಲ್ಲೂಕಿನ ಇಟಗಿ ಗ್ರಾಮದವರಾದ ಈಶಣ್ಣ, 2008ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಶಾಸಕರಾಗಿದ್ದಾಗಲೇ ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆಹಿಡಿದಿದ್ದರು. ಈಚೆಗೆ ಆರೋಗ್ಯ ಕ್ಷೀಣಿಸಿದ್ದ
ರಿಂದ ಗದುಗಿನ ಜರ್ಮನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮಧ್ಯಾಹ್ನ ನಿಧನರಾದರು. ಅವರಿಗೆ ಪತ್ನಿ, ಜಿಲ್ಲಾ ಪಂಚಾಯಿತಿ ಮಾಜಿಸದಸ್ಯೆ ಗಂಗಮ್ಮ ಗುಳಗಣ್ಣವರ ಹಾಗೂ ಇಬ್ಬರು ಪುತ್ರರುಇದ್ದಾರೆ.ಅಂತ್ಯಕ್ರಿಯೆ ಸ್ವಗ್ರಾಮ ಇಟಗಿಯಲ್ಲಿ ಭಾನುವಾರ ಮಧ್ಯಾಹ್ನ 3ಕ್ಕೆನೆರವೇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT