ಶನಿವಾರ, ಮೇ 15, 2021
27 °C

ಅಂಬೇಡ್ಕರ್‌ ಜಯಂತಿ: ಪ್ರಬಂಧ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಬುರ್ತಿ (ಕುಷ್ಟಗಿ): ತಾಲ್ಲೂಕಿನ ಯಲಬುರ್ತಿ ಗ್ರಾಮದಲ್ಲಿ ಬುಧವಾರ ಬುದ್ಧ, ಬಸವ, ಅಂಬೇಡ್ಕರ್ ಯುವಕರ ಬಳಗ‌ದ ವತಿಯಿಂದ ಸಂವಿಧಾನ ಶಿಲ್ಪಿ‌ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ನಡೆದು ಬಂದ ದಾರಿ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.

ಚೈತ್ರಾ ತಟ್ಟಿ (ಪ್ರಥಮ), ಹನುಮಂತ ಈಳಿಗೇರ (ದ್ವಿತೀಯ) ಮತ್ತು ಕವಿತಾ ಗೋಗೇರಿ (ತೃತೀಯ) ಬಹುಮಾನ ಪಡೆದರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೂ ಸಮಾಧಾನಕರ ಬಹುಮಾನ ವಿತರಿಸಲಾಯಿತು.

ಪ್ರಾರಂಭದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಸಮರ್ಪಿಸಲಾಯಿತು.

ಮಹೆಬೂಬ ಎಸ್. ಮುಧೋಳ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಬಹುಮಾನ ನೀಡಿದರು.

ಸಮಾರಂಭದಲ್ಲಿ ಮುಖ್ಯ ಶಿಕ್ಷಕ ಸಿದ್ದಯ್ಯ ಗುರುವಿನ, ಬಾಳಪ್ಪ ಮಾಸ್ತರ್, ಮೈಬುಸಾಬ್ ಮುಧೋಳ, ಸುರೇಶ ಗೊಗೇರಿ, ಫಕೀರಪ್ಪ ಪೂಜಾರ, ರಮೇಶ ಹಾಗೂ ಮಂಜುನಾಥ ಬಳೂಟಗಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು