ಮಂಗಳವಾರ, ಮೇ 17, 2022
24 °C

ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಳ್ಕಿಹಾಳ (ಕಾರಟಗಿ): ತಾಲ್ಲೂಕಿನ ಹುಳ್ಕಿಹಾಳ ಗ್ರಾಮದಲ್ಲಿ ರೈತ ಶಿವರಡ್ಡೆಪ್ಪ ಮುದಕಪ್ಪ ಸಿಂಗನಾಳ (55) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದಲ್ಲಿ 3 ಎಕರೆ ಜಮೀನಿದ್ದು, ಮಾರ್ಲಾನಹಳ್ಳಿಯ ಪಿಕೆಜಿ ಬ್ಯಾಂಕ್‌ನಿಂದ ₹ 4 ಲಕ್ಷ ಹಾಗೂ ಖಾಸಗಿ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೇ ನೊಂದಿದ್ದ ಶಿವರಡೆಪ್ಪ ಜ.27ರಂದು ವಿಷ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಮಂಗಳವಾರ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.