ಶನಿವಾರ, ಏಪ್ರಿಲ್ 1, 2023
23 °C

ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರಟಗಿ: ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳದೆ ರೈತ ಮಂಜುನಾಥಪ್ಪ ಹನುಮಂತಪ್ಪ ಬರ್ಸಿ ಕುರುಬರ (37) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮೃತರು ಗ್ರಾಮದಲ್ಲಿ ಜಮೀನು ಹೊಂದಿದ್ದು, ಗಂಗಾವತಿಯ ಎಸ್‌ಬಿಐ ಬ್ಯಾಂಕ್‌ನಲ್ಲಿ ₹5 ಲಕ್ಷ ಸಾಲ ಮಾಡಿದ್ದರು. ಕೆಲಸ ಅರಸಿಕೊಂಡು ರಾಜಧಾನಿಗೆ ಹೋಗಿದ್ದರು. ಕೊರೊನಾ ಕಾರಣ ಗ್ರಾಮಕ್ಕೆ ಮರಳಿದ್ದರು. ಪತ್ನಿ ತವರು ಮನೆಗೆ ಹೋಗಿದ್ದರಿಂದ ಗ್ರಾಮದ ಮಾಳಿಂಗರಾಯ ದೇವಸ್ಥಾನದ ಹಿಂದಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಪತ್ನಿ ರೇಣುಕಮ್ಮ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.