ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಕನೂರು ತಾಲೂಕಿನ ರೈತ ಆತ್ಮಹತ್ಯೆ

Published 12 ಡಿಸೆಂಬರ್ 2023, 5:34 IST
Last Updated 12 ಡಿಸೆಂಬರ್ 2023, 5:34 IST
ಅಕ್ಷರ ಗಾತ್ರ

ಕೂಕನೂರು (ಕೊಪ್ಪಳ ಜಿಲ್ಲೆ): ಭೀಕರ ಬರಗಾಲಕ್ಕೆ ನಲುಗಿದ ಜಿಲ್ಲೆಯ ಕೂಕನೂರು ತಾಲ್ಲೂಕಿನ ಬೆಣಕಲ್ ಗ್ರಾಮದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹೇಶ ಕುದ್ರಿಕಟಿಗಿ ( 37) ಮೃತ ರೈತ. ಇವರಿಗೆ ಪತ್ನಿ, ಮೂವರು ಮಕ್ಕಳು, ಸಹೋದರ ಹಾಗೂ ತಾಯಿ ಇದ್ದಾರೆ. ಇವರು ಖಾಸಗಿ ಬ್ಯಾಂಕ್‌ ಹಾಗೂ ಕೈಗಡ ಸೇರಿ ವಿವಿಧೆಡೆ ಸಾಲ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಕಾಲಕ್ಕೆ ಮಳೆಯಾಗದಿರುವುದು ಹಾಗೂ ನೀರಾವರಿ ಆಶ್ರಿತ ಭೂಮಿಯಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಂದಿರಲಿಲ್ಲ. ಇದರಿಂದ ನೊಂದು ಸೋಮವಾರ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿದ್ದಾದ ಅವರನ್ನು ಕೂಡಲೇ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಕೂಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT