ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರಟಗಿ | ರೈತರ ಧರಣಿ: ಜಿಲ್ಲಾ ಉಸ್ತುವಾರಿ ಸಚಿವರ ಆಗಮನಕ್ಕೆ ಪಟ್ಟು

Published : 25 ಆಗಸ್ಟ್ 2023, 16:17 IST
Last Updated : 25 ಆಗಸ್ಟ್ 2023, 16:17 IST
ಫಾಲೋ ಮಾಡಿ
Comments

ಕಾರಟಗಿ: ಬರಪೀಡಿತ ಜಿಲ್ಲೆಗಳ ಘೋಷಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಪಟ್ಟಣದಲ್ಲಿ ಕೃಷಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಗುರುವಾರ ಸಂಘದ ರಾಜ್ಯಾಧ್ಯಕ್ಷ ಬಸವರಾಜ್ ಬಿಲ್ಗಾರ, ಕಲ್ಯಾಣ ಕರ್ನಾಟಕ ವಿಭಾಗದ ಅಧ್ಯಕ್ಷ ಹನುಮಂತ ಹಂಚಿನಾಳ ಕ್ಯಾಂಪ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆದಿತ್ತು.ಈ ವೇಳೆ ಅಧಿಕಾರಿಗಳು ನಡೆಸಿದ ಮನವೊಲಿಕೆ ಯತ್ನ ವಿಫಲವಾಗಿತ್ತು.

ಶುಕ್ರವಾರ ತಹಶೀಲ್ದಾರ್ ಎಂ. ಕುಮಾರಸ್ವಾಮಿ, ಜಲಸಂಪನ್ಮೂಲ ಇಲಾಖೆಯ ಎಂಜಿನಿಯರ್‌ಗಳಾದ ಸುಬ್ರಹ್ಮಣ್ಯ, ನಾಗಪ್ಪ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿದರು.

ಶನಿವಾರದಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇವೆ. ರೈತರ ಸತ್ಯಾಗ್ರಹ ಸಚಿವರು ಬರುವವರೆಗೆ ಮುಂದುವರೆಯಲಿದೆ ಎಂದು ತಹಶೀಲ್ದಾರ್‌ಗೆ ಸಲ್ಲಿಸಿರುವ ಮನವಿಯಲ್ಲಿ ರೈತ ಮುಖಂಡರು ತಿಳಿಸಿದ್ದಾರೆ.

ಸಚಿವರು ಬರುವವರೆಗೆ ಧರಣಿ: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅಥವಾ ಜಿಲ್ಲಾಧಿಕಾರಿ ಆಗಮಿಸಿ, ರೈತರ ಸಂಕಷ್ಟಕ್ಕೆ ಸ್ಪಂದಿಸಿ, ಸಕಾರಾತ್ಮಕ ಭರವಸೆ ನೀಡುವವರೆಗೆ ಅನಿರ್ಧಿಷ್ಟಾವಧಿ ಧರಣಿ ಮುಂದುವರೆಯಲಿದೆ. ಇದಲ್ಲದೇ ಸರ್ಕಾರದ ಗಮನ ಸೆಳೆಯಲು ಇತರ ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಒಂದೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುತ್ತೇವೆ ಎಂದು ಕೃಷಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಬಿಲ್ಗಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT