ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹ

ಕುಕನೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳಿಂದ ರೈತರ ಬದುಕು ಬೀದಿಗೆ ಬೀಳಲಿದೆ. ಅವುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ನಂತರ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಂದಪ್ಪ ಕೋಳೂರ, ಅಂದಪ್ಪ ಹುರಳಿ, ಬಸವರಾಜ ಕೊಡ್ಲಿ, ನಿಂಗಪ್ಪ ಗೊರ್ಲೆಕೊಪ್ಪ, ಮಹೇಶಪ್ಪ ಬೆದವಟ್ಟಿ, ಶಿವಪ್ಪ ಸಂಧಿಮನಿ, ಭರಮಪ್ಪ ತಳವಾರ, ಹುಚ್ಚೀರಪ್ಪ ಕೌದಿ ಹಾಗೂ ಶಿವಪ್ಪ ಯಡ್ಡೋಣಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.