ಭಾನುವಾರ, ಮೇ 29, 2022
21 °C

‘ಶಿಕ್ಷಣದಿಂದ ಪ್ರಗತಿ ಸಾಧ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ‘ಆರ್ಥಿಕ, ಸಾಮಾಜಿಕ, ರಾಜಕೀಯ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕಾದರೆ ಶಿಕ್ಷಣದ ಅವಶ್ಯಕತೆ ಇದೆ’ ಎಂದು ಪಟ್ಟಣ ಪಂಚಾಯಿತಿ ನೂತನ ಸದಸ್ಯ ಸುರೇಶ ಗುಗ್ಗಳಶೆಟ್ರ ತಿಳಿಸಿದರು.

ಇಲ್ಲಿನ ಎಪಿಎಂಸಿ ದಲ್ಲಾಳಿ ಅಂಗಡಿಯಲ್ಲಿ ಬಣಜಿಗ ಸಮಾಜದ ವತಿಯಿಂದ ಬುಧವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಬಣಜಿಗರು ವ್ಯಾಪಾರದ ಜತೆಗೆ ತಮ್ಮ ಮಕ್ಕಳಿಗೆ ಉತ್ತಮ ಮತ್ತು ಉನ್ನತ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.

ಸಿಮೆಂಟ್ ಕಾಂಕ್ರಿಟ್ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಹಾಗೂ ವಾರ್ಡ್‌ನ ಮತದಾರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.

ಬಣಜಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಶರಣಬಸಪ್ಪ ಭತ್ತದ ಮಾತನಾಡಿದರು.

ಚಿತ್ರಕಲೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸಮಾಜದ ವಿದ್ಯಾರ್ಥಿನಿ ರಕ್ಷಿತಾ ಪ್ರಕಾಶ ತೆಂಗಿನಕಾಯಿ ಅವರನ್ನು ಸನ್ಮಾನಿಸಲಾಯಿತು.

ಪ್ರಮುಖರಾದ ಬಸವರಾಜ ಗುಗ್ಗಳಶೆಟ್ರ, ವಿರೂಪಾಕ್ಷಪ್ಪ ಭತ್ತದ, ಸಂಗಪ್ಪ ತೆಂಗಿನಕಾಯಿ, ಮುನಿಯಪ್ಪ ಪ್ರಭುಶೆಟ್ರ, ಶರಣಪ್ಪ ಕರಡೋಣ, ಶ್ರೀಶೈಲ ಪಾಟೀಲ, ಶರಣಪ್ಪ ಕಲಕೇರಿ, ಪ್ರಕಾಶ ಹಾದಿಮನಿ, ಶಿವಕುಮಾರ ಕೋರಿಶೆಟ್ರ, ಅಮರೇಶ ಪಟ್ಟಣಶೆಟ್ರ, ಪ್ರಶಾಂತ ಪ್ರಭುಶೆಟ್ರ, ಪ್ರವೀಣ ಕೋರಿ, ಮಲ್ಲಿಕಾರ್ಜುನ ಹಾದಿಮನಿ ಹಾಗೂ ಮುದಿಯಪ್ಪ ಮೂಲಿಮನಿ ಇದ್ದರು.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು