ಭಾನುವಾರ, ಜನವರಿ 23, 2022
27 °C

‘ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಹೋಗಿ ಕೋವಿಡ್ ಲಸಿಕೆ ಹಾಕಿ ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಅವರ ಸೇವೆ ಶ್ಲಾಘನೀಯ’ ಎಂದು ಕೊಪ್ಪಳ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ನೀತಾ ತಂಬ್ರಳ್ಳಿ ಹೇಳಿದರು.

ಹೊಸ ವರ್ಷದ ಪ್ರಯುಕ್ತ ನಗರದ ಇನ್ನರ್ ವ್ಹೀಲ್ ಕ್ಲಬ್ ಸಭಾಂಗಣದಲ್ಲಿ ಶನಿವಾರ ನಡೆದ ಆಶಾ ಕಾರ್ಯಕರ್ತೆಯರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಮನೆಗೆ ಹೋಗಿ ಲಸಿಕೆ ಹಾಕಿ ಜನರ ಪ್ರಾಣ ಉಳಿಸುವ ಕಾರ್ಯ ಮಾಡಿದ್ದಾರೆ. ಹೊಸ ವರ್ಷದ ಪಯುಕ್ತ ಅವರನ್ನು ಸನ್ಮಾನಿಸಿ, ಪ್ರೋತ್ಸಾಹಿಸುವ ಕೆಲಸ ನಮ್ಮ ಕ್ಲಬ್‌ ಮಾಡುತ್ತಿದೆ ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಕಳಸಾಪುರ ಮತ್ತು ರಾಧಾ ಕುಲಕರ್ಣಿ ಪಾಲ್ಗೊಂಡಿದ್ದರು. ವಿಜಯಲಕ್ಷ್ಮೀ ಹಂಚಾಟೆ, ಮಧು ನಿಲೋಗಲ್, ಉಮಾ ತಂಬ್ರಳ್ಳಿ ಹಾಗೂ ರೇಖಾ ಕಡ್ಲಿ ಸೇರಿದಂತೆ ಹಲವರು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.