ಸೋಮವಾರ, ಜುಲೈ 4, 2022
21 °C

ಗಂಗಾವತಿ: ಕೊರೊನಾ ವಾರಿಯರ್ಸ್‌ಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆ ಸಿಬ್ಬಂದಿಯನ್ನು ಶಾಸಕ ಪರಣ್ಣ ಮುನವಳ್ಳಿ ಶನಿವಾರ ಸನ್ಮಾನಿಸಿದರು.

ನಂತರ ಮಾತನಾಡಿದ ಅವರು,‘ತಾಲ್ಲೂಕಿನಲ್ಲಿ ಕೊರೊನಾ ಹರಡಿದ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಜನರಿಗೆ ಅಗತ್ಯ ಸೇವೆ ಒದಗಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವೈದರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಸುಮಾರು 1,200 ಕ್ಕಿಂತ ಹೆಚ್ಚು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಅವರನ್ನು ಗುಣಪಡಿಸಿದ್ದಾರೆ. ಅವರ ಕಾರ್ಯ ಶ್ಲಾಘನೀಯ’ ಎಂದು ತಿಳಿಸಿದರು.

ಆಸ್ಪತ್ರೆಯ 35 ಸಿಬ್ಬಂದಿಗೆ ಆಹಾರ ಧಾನ್ಯದ ಕಿಟ್‌ ಹಾಗೂ ಪ್ರೋತ್ಸಾಹ ಧನ ವಿತರಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ರಫಿ, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ, ತಾಲ್ಲೂಕು ಆರೋಗ್ಯ ಅಧಿಕಾರಿ ಗೌರಿಶಂಕರ, ವೈದ್ಯ ಡಾ.ಶರಣಪ್ಪ, ಆರೋಗ್ಯ ರಕ್ಷಣಾ ಸಮಿತಿ ಸದಸ್ಯೆ ಟಿ.ಎಂ.ಶಾಲಿನಿ, ಪ್ರಮುಖರಾದ ಶಿವಕುಮಾರ್ ಅರಕೇರಿ, ಟಿ.ಆರ್.ರಾಯಬಾಗಿ ಹಾಗೂ ಶಿವಾನಂದ ರಾಯ್ಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು