ಬುಧವಾರ, ಆಗಸ್ಟ್ 10, 2022
24 °C

ಶಿಕ್ಷಕನ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಹಮ್ಮದ್ ಅಜರುದ್ದೀನ್ ಎಂಬಾತನ ವಿರುದ್ಧ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಶಿಕ್ಷಕ ಈಗಾಗಲೇ ಅಮಾನತುಗೊಂಡಿದ್ದು, ನಾಲ್ಕು ದಿನಗಳಿಂದ ಪತ್ತೆಯಾಗಿಲ್ಲ. ಕಾರಟಗಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಆತನ ಮೊಬೈಲ್‌ ಫೋನ್ ಕೂಡ ಸ್ವಿಚ್ ಆಫ್ ಆಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಗಳಿಗೆ ಟ್ಯೂಷನ್ ಹೇಳಿಕೊಡುವುದರ ಜೊತೆಗೆ ಸರ್ಕಾರಿ ಸೌಲಭ್ಯ ಕಲ್ಪಿಸುವುದಾಗಿ ಹೇಳಿ ಮಹಮ್ಮದ್ ಅಜರುದ್ದೀನ್‌ ನನ್ನನ್ನು ಓಲೈಸಿ, ಮನೆಗೆ ಕರೆದೊಯ್ದ. ಲೈಂಗಿಕ ಕ್ರಿಯೆಗೆ ಸಹಕರಿಸಲು ಪದೇ ಪದೇ ಒತ್ತಾಯಿಸಿದ. ಇಲ್ಲದಿದ್ದರೆ, ವಿಡಿಯೊಗಳನ್ನು ತವರು ಮನೆಯವರಿಗೆ ಕಳುಹಿಸಿ, ಮಾನ–ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಒಡ್ಡಿದ’ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು