ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಜನಾರ್ದನ ರೆಡ್ಡಿ ನಾಮಪತ್ರದಲ್ಲಿ ಲೋಪ ಆರೋಪ, ದೂರು ಸಲ್ಲಿಕೆ

Published 4 ಜುಲೈ 2023, 21:32 IST
Last Updated 4 ಜುಲೈ 2023, 21:32 IST
ಅಕ್ಷರ ಗಾತ್ರ

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಗೆದ್ದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಜನಾರ್ದನ ರೆಡ್ಡಿ ನಾಮಪತ್ರದಲ್ಲಿ ದೋಷವಿದ್ದು, ಈ ಕುರಿತು ವಿಚಾರಣೆ ನಡೆಸಬೇಕು ಎಂದು ಅನಂತಪುರದ ಗಣಿ ಉದ್ಯಮಿ ಶ್ಯಾಂ ಪ್ರಸಾದ್ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ರೆಡ್ಡಿ ಸಲ್ಲಿಸಿದ ನಾಮಪತ್ರದಲ್ಲಿ ಸಾಕಷ್ಟು ಲೋಪದೋಷಗಳು ಇವೆ. ಆಸ್ತಿ ವಿವರದಲ್ಲಿ ವಾಹನಗಳ ಬಗ್ಗೆ ಉಲ್ಲೇಖಿಸಿಲ್ಲ. ಈ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶ್ಯಾಂ ಪ್ರಸಾದ ಅವರು ಸಲ್ಲಿಸಿದ ದೂರಿನ ಮೇರೆಗೆ ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳು ಕೊಪ್ಪಳ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಗಂಗಾವತಿ ಕ್ಷೇತ್ರದ ಚುನಾವಣಾಧಿಕಾರಿಯಾಗಿದ್ದ ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ ’ನಾಮಪತ್ರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದೇವೆ. ಲೋಪಗಳಿದ್ದರೆ ಆಗಲೇ ಗಮನಕ್ಕೆ ತರಬೇಕಿತ್ತು ಎಂದು ದೂರುದಾರರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT