ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಶಿವರಾಜ ತಂಗಡಗಿ ವಿರುದ್ಧ ಎಫ್‌ಐಆರ್ ದಾಖಲು

Published 26 ಮಾರ್ಚ್ 2024, 16:57 IST
Last Updated 26 ಮಾರ್ಚ್ 2024, 16:57 IST
ಅಕ್ಷರ ಗಾತ್ರ

ಕಾರಟಗಿ (ಕೊಪ್ಪಳ ಜಿಲ್ಲೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಕಾರಣಕ್ಕಾಗಿ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.

‘ಶಿವರಾಜ ತಂಗಡಗಿ ತಮ್ಮ ಭಾಷಣದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು’ ಎಂದು ಕಾರಟಗಿಯಲ್ಲಿ ಚುನಾವಣಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಗಂಗಾವತಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗ್ಯಾನನಗೌಡ ನಂದನಗೌಡ ಬೆಳಿಗ್ಗೆ ದೂರು ನೀಡಿದ್ದರು. ನ್ಯಾಯಾಲಯದ ಅನುಮತಿ ಪಡೆದ ಬಳಿಕ ಪೊಲೀಸರು ರಾತ್ರಿ ಎಫ್‌ಐಆರ್‌ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT