ಕೊಪ್ಪಳ: ಇಲ್ಲಿನ ಅಗ್ನಿಶಾಮಕ ದಳದಲ್ಲಿ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದ ಮೂಲತಃ ಕಲಬುರಗಿಯ ದೇವಿನಗರದ ನಿವಾಸಿ ಶರಣಬಸವ (26) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಲ್ಲಿನ ಹೊಸಪೇಟೆ ರಸ್ತೆಯಲ್ಲಿರುವ ಮರಿಶಾಂತವೀರ ನಗರದಲ್ಲಿರುವ ಬಾಡಿಗೆ ಮನೆಯಲ್ಲಿ ಶರಣಬಸವ ನೆಲೆಸಿದ್ದರು. ಬೆಳಿಗ್ಗೆ ಕೊಠಡಿಯಿಂದ ಹೊರಬಂದು ಇತ್ತೀಚೆಗೆ ಖರೀದಿ ಮಾಡಿದ್ದ ತಮ್ಮ ರಾಯಲ್ ಎನ್ಫೀಲ್ಡ್ ಬೈಕ್ ಸ್ವಚ್ಛಗೊಳಿಸಿ ಹಾಗೂ ಸುತ್ತಲೂ ಓಡಾಡಿ ಮತ್ತೆ ಕೊಠಡಿಗೆ ವಾಪಸ್ ಹೋಗಿದ್ದರು. ಬಳಿಕ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿಷಯ ತಿಳಿದು ಪೊಲೀಸರು ಕೊಠಡಿ ಪರಿಶೀಲಿಸಿ ಅವರ ಕುಟುಂಬದವರಿಗೆ ವಿಷಯ ಮುಟ್ಟಿಸಿದ್ದಾರೆ. ಕಲಬುರಗಿಯಿಂದ ಕುಟುಂಬದವರು ಬಂದ ಬಳಿಕವೇ ಅವರ ಸಮ್ಮುಖದಲ್ಲಿ ಮೃತದೇಹವನ್ನು ಕೆಳಗಡೆ ಇಳಿಸಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಯಿತು. ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೊಠಡಿಯಲ್ಲಿ ಮೊಬೈಲ್ ಪೋನ್ ಹಾಗೂ ಇನ್ನಿತರ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.