ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುರುಷರ ಕಬಡ್ಡಿ ಸ್ಪರ್ಧೆ: ಯಲಬುರ್ಗಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ

Published : 20 ಸೆಪ್ಟೆಂಬರ್ 2024, 15:31 IST
Last Updated : 20 ಸೆಪ್ಟೆಂಬರ್ 2024, 15:31 IST
ಫಾಲೋ ಮಾಡಿ
Comments

ಯಲಬುರ್ಗಾ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಅಂತರ ಕಾಲೇಜು ಪದವಿ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಏಡ್ಸ್ ನಿಯಂತ್ರಣ ಕುರಿತ ಜಾಗೃತಿ ಹಾಗೂ ಯುವಜನೋತ್ಸವ 2024ರ ಪ್ರಯುಕ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವುಗಳ ಸಹಯೋಗದಲ್ಲಿ ಪಂದ್ಯಾಟ ಆಯೋಜಿಸಲಾಗಿತ್ತು. ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮೆಚ್ಚುಗೆ: ಕಾಲೇಜಿನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿನ ಸಾಧನೆಗೆ ಪ್ರಾಚಾರ್ಯ ಕೆ.ಎಚ್.ಛತ್ರದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮ್ಯಾರಾಥಾನ್ ಓಟದ ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿ ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದಿದ್ದರು. ಹಾಗೆಯೇ ಕಬಡ್ಡಿಯಲ್ಲಿಯೂ ಕೂಡಾ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ತೋರಿ ಪ್ರಥಮ ಬಹುಮಾನ ಪಡೆದಿದ್ದು ಖುಷಿ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಿಸ್ಸಾರ ಅಹ್ಮದ್ ಸರ್ಕಾವಸ್‌ ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳ ಸಾಧನೆಗೆ ಸಂಭ್ರಮಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT