ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ಭೀಕರ ಅಪಘಾತ: ಐದು ಮಂದಿ ಸಾವು; ಮೂವರ ಸ್ಥಿತಿ ಚಿಂತಾಜನಕ

Last Updated 20 ನವೆಂಬರ್ 2020, 11:09 IST
ಅಕ್ಷರ ಗಾತ್ರ

ಕೊಪ್ಪಳ: ಕುಕನೂರು ತಾಲ್ಲೂಕಿನ ನಿಟ್ಟಾಲಿ ಕ್ರಾಸ್ ಬಳಿ ಟೆಂಪೊ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸಾವಿಗೀಡಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಅಗಸನಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. ಕೊಪ್ಪಳ ತಾಲ್ಲೂಕಿನ ಹಿರೇಸಿಂದೋಗಿ ಗ್ರಾಮಕ್ಕೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಅಗಸನಕೊಪ್ಪ ಗ್ರಾಮದಿಂದ ತೆರಳುತ್ತಿದ್ದ ಟೆಂಪೊದಲ್ಲಿ 22 ಜನರು ಇದ್ದರು. ನಿಟ್ಟಾಲಿ ಬಳಿ ವೇಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಅಪಘಾತದಿಂದ ತಪ್ಪಿಸುವ ಉದ್ದೇಶದಿಂದ ಟೆಂಪೊ ಪಲ್ಟಿಯಾಗಿ ಬಿದ್ದಿದೆ. ಗಾಯಗಳು, ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ. ವಾಹನದಲ್ಲಿ ಇದ್ದ ಬಹುತೇಕರು ಗಾಬರಿಯಿಂದ ಕಿರುಚಾಡುತ್ತಿರುವುದು ಕಂಡು ಬಂತು.

ಆಸ್ಪತ್ರೆಗೆ ಬಂದ ಶಾಸಕ: ಇಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆದಿತ್ತು. ಮಧ್ಯಾಹ್ನ 1.45ಕ್ಕೆ ಅಪಘಾತಗೊಂಡ ಸುದ್ದಿ ತಿಳಿದು ಬಂತು. ತಕ್ಷಣ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಚಿಕಿತ್ಸೆಗೆ ನೆರವಾದರು.

ಆಸ್ಪತ್ರೆಯಲ್ಲಿ ಬೆಡ್ಗಳ ಕೊರತೆ ಇದ್ದುದರಿಂದ ಅಲ್ಪಸ್ವಲ್ಪ ಗಾಯಗೊಂಡವರನ್ನು ನೆಲದ ಮೇಲೆ ಮಲಗಿಸಿ ತುರ್ತು ಚಿಕಿತ್ಸೆ ನೀಡುತ್ತಿರುವುದು ಕಂಡು ಬಂದಿತು.

ಅಪಘಾತ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು.ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ ಕಲೆ ಹಾಕಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT