ಕೊಪ್ಪಳ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುವ ಮಕ್ಕಳ ಸಹಾಯವಾಣಿಗೆ ಬಂದ ದೂರವಾಣಿ ಕರೆಯಿಂದ ತ್ವರಿತ ಕಾರ್ಯಾಚರಣೆ ಕೈಗೊಂಡಿದ್ದರಿಂದ ಮಕ್ಕಳ ರಕ್ಷಣಾ ಘಟಕವು ಬಾಲ್ಯವಿವಾಹದ ಕೂಪಕ್ಕೆ ಬೀಳುತ್ತಿದ್ದ ಐದು ಜನ ಬಾಲಕಿಯರನ್ನು ರಕ್ಷಣೆ ಮಾಡಿದೆ.

ಯಲಬುರ್ಗಾ ತಾಲ್ಲೂಕಿನ ಬೇವೂರು ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು, ಯಲಬುರ್ಗಾ ಠಾಣೆ ವ್ಯಾಪ್ತಿಯ ಒಬ್ಬ ಬಾಲಕಿ ಮತ್ತು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಸಿಬ್ಬಂದಿ, ಅಕ್ಕಪಡೆ ಮತ್ತು 112 ಪೊಲೀಸ್ ಸಿಬ್ಬಂದಿ, ವಲಯ ಮೇಲ್ವಿಚಾರಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಪುರಸಭೆ ಸಿಬ್ಬಂದಿ ಸಹಯೋಗದೊಂದಿಗೆ ಐವರು ಬಾಲಕಿಯರನ್ನು ರಕ್ಷಿಸಿ, ಅವರ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.

‘ಈಗ ವಿವಾಹ ಮುಹೂರ್ತ ಆರಂಭವಾಗಿರುವುದರಿಂದ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಹಾಗೂ ಸಂಬಂಧಿತ ಅಧಿಕಾರಿಗಳು ವಧು-ವರರ ವಯಸ್ಸಿನ ದೃಢೀಕರಣ ಕಡ್ಡಾಯವಾಗಿ ಪರಿಶೀಲಿಸಬೇಕು’ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.