ಕೋವಿಡ್ ಮಾರ್ಗಸೂಚಿ ಪಾಲಿಸಿ

ಗಂಗಾವತಿ: ‘ಕೊರೊನಾ ಸೋಂಕಿನಿಂದ ಜನ ಜೀವನಕ್ಕೆ ತೊಂದರೆಯಾಗಿದ್ದು, ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮನವಿ ಮಾಡಿದರು.
ನಗರದ 23ನೇ ವಾರ್ಡ್‌ನ ಆರೋನ್ ಮಿರಜಕಲ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು.
ಹೆಚ್ಚು ಗಿಡ–ಮರಗಳನ್ನು ಬೆಳೆಸುವ ಮೂಲಕ ಶುದ್ಧ ಗಾಳಿ ಪಡೆಯಬೇಕು. ಇದರಿಂದ ಎಲ್ಲರಿಗೂ ಅನುಕೂಲವಾಗುತ್ತದೆ. ಕೋವಿಡ್ ಸಂಕಷ್ಟ ನೋಡಿಯಾದರೂ ನಾವು ಪಾಠ ಕಲಿಯಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.
ಪರಸ್ಪರ ಅಂತರ, ವೈಯಕ್ತಿಕ ಸ್ವಚ್ಛತೆ, ಮುಖಕ್ಕೆ ಮಾಸ್ಕ್ ಹಾಕಿಕೊಳ್ಳುವ ಮೂಲಕ ಸೋಂಕು ಬಾರದಂತೆ ಎಚ್ಚರಿಕೆ ವಹಿಸಬೇಕು. ಕೋವಿಡ್ ವಿರುದ್ಧದ ಯುದ್ಧಕ್ಕೆ ಎಲ್ಲರ ಸಹಕಾರವೂ ಬೇಕು. ಆದ್ದರಿಂದ ಎಲ್ಲರೂ ಕೈಜೋಡಿಸಬೇಕಾದ ಅಗತ್ಯ ಇದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ನಗರಸಭೆ ಸದಸ್ಯ ಎಫ್.ರಾಘವೇಂದ್ರ, ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು, ರುಬಿನಾ ಮಿರಜಕರ್, ಯೋಜನಾ ನಿರ್ದೇಶಕರ ಗಂಗಪ್ಪ, ತಹಶೀಲ್ದಾರ ಯು. ನಾಗರಾಜ್, ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ, ಗಂಗಾವತಿ ವಲಯ ಅರಣ್ಯಾಧಿಕಾರಿ ಶಿವರಾಜ ಮೇಟಿ ಹಾಗೂ ಉಪ ಅರಣ್ಯ ಅಧಿಕಾರಿ ಶ್ರೀನಿವಾಸ ಮೂಲಿಮನಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.