ಶುಕ್ರವಾರ, ಆಗಸ್ಟ್ 12, 2022
23 °C

ತಾವರಗೇರಾ: ಕೊರೊನಾ ವಾರಿಯರ್ಸ್‌ಗೆ ಆಹಾರ ಧಾನ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾವರಗೇರಾ: ‘ಕೊರೊನಾ ವಾರಿಯರ್‌ಗಳು ಅಪಾಯವನ್ನೂ ಲೆಕ್ಕಿಸದೇ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡನಗೌಡ ಪಾಟೀಲ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಆಶಾ ಕಾರ್ಯಕರ್ತೆಯರು ಹಾಗೂ ಗೃಹರಕ್ಷಕ ಸಿಬ್ಬಂದಿಗೆ ಆಹಾರ ಧಾನ್ಯದ ಕಿಟ್‍ ವಿತರಿಸಿ ಮಾತನಾಡಿದರು.

ಮುಖಂಡ ಚಂದ್ರಶೇಖರ ನಾಲ್ತವಾಡ ಮಾತನಾಡಿ,‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜನರ ಜೀವ ಉಳಿಸಲು ಶ್ರಮಿಸುತ್ತಿವೆ. ಕೋವಿಡ್ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ ಜನರ ದಾರಿ ತಪ್ಪಿಸುತ್ತಿದೆ. ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಪಕ್ಷಭೇದ ಮರೆತು ಸರ್ಕಾರಕ್ಕೆ ಸಹಕಾರ ನೀಡುವ ಮೂಲಕ ಒಟ್ಟಾಗಿ ಕೊರೊನಾದ ವಿರುದ್ಧ ಹೋರಾಡಬೇಕಿದೆ’ ಎಂದರು.

ತಾವರಗೇರಾ ಪಟ್ಟಣದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರ ನೇತೃತ್ವದಲ್ಲಿ ವಾರ ವಿವಿಧ ಇಲಾಖೆಗಳ ವಾರಿಯರ್‌ಗಳಿಗೆ ಕಿಟ್ ವಿತರಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಮಹೇಶ, ಬಿಜೆಪಿ ಮುಖಂಡರಾದ ಸಾಗರ ಬೇರಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೂಲಕುಂಟಿ, ನಾರಾಯಣಸಿಂಗ್ ಆನೇರಿ, ಬಸನಗೌಡ ಓಲಿ, ಚನ್ನಪ್ಪ ಸಜ್ಜನ, ವೀರೇಶ ಭೋವಿ, ಶಂಭುನಗೌಡ ಪಾಟೀಲ, ಶಿವನಗೌಡ ಪಾಟೀಲ, ಲಕ್ಷ್ಮಣ ಮುಖಯಾಜಿ, ಮಂಜು ದೇಸಾಯಿ ಮತ್ತು ಆಶಾ ಕಾರ್ಯಕರ್ತೆಯರು, ಗೃಹ ರಕ್ಷಕ ಸಿಬ್ಬಂದಿ ಹಾಗೂ ಕಾರ್ಯಕರ್ತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು