ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಚಕರಿಗೆ ಆಹಾರ ಧಾನ್ಯದ ಕಿಟ್: ತಯಾರಿ

Last Updated 28 ಮೇ 2021, 13:26 IST
ಅಕ್ಷರ ಗಾತ್ರ

ಮುನಿರಾಬಾದ್: ಲಾಕ್‌ಡೌನ್‌ ಕಾರಣ ಸಂಕಷ್ಟಕ್ಕೊಳಗಾದ ಜಿಲ್ಲೆಯ 736 ಸಿ ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ ಆಹಾರ ಧಾನ್ಯದ ಕಿಟ್ ನೀಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಇಲ್ಲಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಅಕ್ಕಿ, ಬೇಳೆ, ಗೋಧಿ, ಸಕ್ಕರೆ, ಅಡುಗೆ ಎಣ್ಣೆ ಮತ್ತು ಅವಲಕ್ಕಿ ಸೇರಿ ಇತರ ಪದಾರ್ಥಗಳಿರುವ ದವಸ ಧಾನ್ಯಗಳ ಕಿಟ್ ತಯಾರಿಸಲಾಗಿದೆ.

‘ಸರ್ಕಾರದ ನಿರ್ದೇಶನ ಮತ್ತು ಜಿಲ್ಲಾಧಿಕಾರಿ ಆದೇಶದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳ ಮೂಲಕ ಆಯಾ ತಾಲ್ಲೂಕಿನ ಸಿ ದರ್ಜೆ ದೇವಸ್ಥಾನಗಳ ಅರ್ಚಕರುಗಳಿಗೆ ಶೀಘ್ರದಲ್ಲೇ ಕಿಟ್ ನೀಡಲಾಗುವುದು. ಜಿಲ್ಲೆಯಲ್ಲಿ ಒಟ್ಟು 736 ಸಿ ದರ್ಜೆ ದೇವಸ್ಥಾನಗಳಿದ್ದು, 750 ಕಿಟ್ ತಯಾರಿಸಲಾಗಿದೆ’ ಎಂದು ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT