ಕೊಪ್ಪಳ: ಇಲ್ಲಿಗೆ ಸಮೀಪದ ಭಾಗ್ಯನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಿವೇಶನ ಹಾಗೂ ಕಟ್ಟಡಗಳಿಗೆ ಫಾರ್ಮ್ ನಂಬರ್ 3 ನೀಡಬೇಕು ಎಂದು ಆಗ್ರಹಿಸಿ ಹೋರಾಟ ಸಮಿತಿ ಸೋಮವಾರ ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿ ಬುಧವಾರ ಮುಕ್ತಾಯವಾಗಿದೆ.
‘ಬುಧವಾರ ನಾಲ್ಕು ಜನರಿಗೆ ದಾಖಲಾತಿ ನೀಡಲಾಗಿದೆ. ಕೊಪ್ಪಳ ತಹಶೀಲ್ದಾರ್ ಅಮರೇಶ ಬಿರಾದಾರ್ ಸಮಸ್ಯೆ ಪರಿಹರಿಸಿದ್ದಾರೆ. ಹೀಗಾಗಿ ಧರಣಿ ವಾಪಸ್ ಪಡೆದಿದ್ದೇವೆ. ಗುರುವಾರದಿಂದ ಅರ್ಜಿ ಸಲ್ಲಿಸದವರಿಗೆ ಸರತಿ ಮೇಲೆ ಫಾರ್ಮ್ ನಂಬರ್ 3 ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ’ ಎಂದು ಹೋರಾಟ ಸಮಿತಿ ಅಧ್ಯಕ್ಷ ಗ್ಯಾನೇಶ್ ಹ್ಯಾಟಿ ತಿಳಿಸಿದರು.
ಉದ್ಯಮಿ ಶ್ರೀನಿವಾಸ ಗುಪ್ತಾ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ ಮಹಾಂತಯ್ಯಮಠ ಸೇರಿದಂತೆ ಅನೇಕರು ಹೋರಾಟಕ್ಕೆ ಬೆಂಬಲ ನೀಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.