ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನನಗೆ ಗಂಗಾವತಿ ಕ್ಷೇತ್ರದ ಟಿಕೆಟ್: ಅನ್ಸಾರಿ
ಕೊಪ್ಪಳ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರಕ್ಕೆ ಕಾಂಗ್ರೆಸ್ ನನಗೇ ಟಿಕೆಟ್ ನೀಡಲಿದೆ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಜುಲೈ 3ಕ್ಕೆ ಬೆಂಗಳೂರಿಗೆ ಬರಲು ಹೇಳಿದ್ದಾರೆ. ಆಕಾಂಕ್ಷಿಗಳು ಯಾರೇ ಆಗಲಿ ನನಗೆ ಟಿಕೆಟ್ ನೀಡುವ ಭರವಸೆ ಇದೆ ಎಂದರು.
ಮುಂದುವರಿದು, ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ಬಿಡುವುದಿಲ್ಲ. ಮುಸ್ಲಿಮರೂ ಕಾಂಗ್ರೆಸ್ ಬೆಂಬಲಿಸಲಿದ್ದಾರೆ. ಕ್ಷೇತ್ರದ ಕುರಿತು ಶಿವಕುಮಾರ್ ಮಾತನಾಡಿದ್ದಾರೆ. ಗಂಗಾವತಿ ಕ್ಷೇತ್ರದಲ್ಲಿ 85 ಸಾವಿರ ಡಿಜಿಟಲ್ ಸದಸ್ಯತ್ವ ಮಾಡಿಸಿದ್ದೇನೆ. ಹೀಗಾಗಿ ನನಗೇ ಟಿಕೆಟ್ ಸಿಗಲಿದೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.