ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಾವ ಅಭಿವೃದ್ಧಿ ಕೆಲಸ ನಿಲ್ಲಲ್ಲ: ರಾಘವೇಂದ್ರ ಹಿಟ್ನಾಳ

Published 6 ಅಕ್ಟೋಬರ್ 2023, 7:36 IST
Last Updated 6 ಅಕ್ಟೋಬರ್ 2023, 7:36 IST
ಅಕ್ಷರ ಗಾತ್ರ

ಕೊಪ್ಪಳ: ಇಲ್ಲಿನ ಡಾಲರ್ಸ್‌ ಕಾಲೊನಿಯಲ್ಲಿ ₹2.50 ಕೋಟಿಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿ ‘ಚುನಾವಣೆ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಜಾರಿ ಮಾಡಿದ್ದೇವೆ. ಹೀಗಾಗಿ ಈ ವರ್ಷ ಸ್ವಲ್ಪ ಆರ್ಥಿಕ ಸಂಕಷ್ಟ ಇರಬಹುದು. ಡಿಸೆಂಬರ್ ವೇಳೆಗೆ ಎಲ್ಲ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಸಿಗಲಿದೆ’ ಎಂದರು.

ಪಕ್ಷದ ಮುಖಂಡರಾದ ಎಸ್‌.ಬಿ. ನಾಗರಳ್ಳಿ, ಜುಲ್ಲು ಖಾದ್ರಿ, ಗೂಳಪ್ಪ ಹಲಿಗೇರಿ, ಗಾಳೆಪ್ಪ ಪೂಜಾರ, ಶರಣಪ್ಪ ಸಜ್ಜನ, ಬಾಲಚಂದ್ರನ ಮುನಿರಾಬಾದ್, ಹನುಮರಡ್ಡಿ ಹಂಗನಕಟ್ಟಿ, ತೋಟಪ್ಪ ಕಾಮನೂರು, ಜ್ಯೋತಿ ಗೊಂಡಬಾಳ, ಸೌಭಾಗ್ಯ ಲಕ್ಷ್ಮೀ, ಪದ್ಮಾವತಿ, ತಾಲ್ಲೂಕು ಪಂಚಾಯಿತಿ ಇಒ ದುಂಡೇಶ್ ತುರಾದಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಲ್ಟಾನ, ಜಿಲ್ಲಾ ಮಾಧ್ಯಮ ವಕ್ತಾರ ರವಿ ಕುರುಕೋಡು ಇದ್ದರು.

ಜನಸಂಪರ್ಕ ಸಭೆ: ತಾಲ್ಲೂಕಿನ ಚುಕ್ಕನಕಲ್, ಮುದ್ದಾಬಳ್ಳಿ, ಹೊಸ ಗೊಂಡಬಾಳ, ಹಳೇ ಗೊಂಡಬಾಳ, ಹ್ಯಾಟಿ, ಮುಂಡರಗಿ, ಮೆಳ್ಳಿಕೇರಿ, ಹೊಸಹಳ್ಳಿ, ಬಹದ್ದೂರ್ ಬಂಡಿ ಹಾಗೂ ಹೂವಿನಾಳ ಗ್ರಾಮಗಳಲ್ಲಿ ಶಾಸಕ ಹಿಟ್ನಾಳ ಜನಸಂಪರ್ಕ ಸಭೆ ನಡೆಸಿದರು.

‘103 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನ ಒದಗಿಸುವ ₹260 ಕೋಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಟೆಂಡರ್ ಹಂತದಲ್ಲಿದ್ದು, ಶೀಘ್ರದಲ್ಲಿ ಕಾಮಗಾರಿಯನ್ನು ಪ್ರಾರಂಭ ಮಾಡಿ ತುಂಗಾಭದ್ರ ಹಿನ್ನೀರು ಬಳಸಿಕೊಂಡು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುವುದು’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT