ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಬ್ರಿಡ್ಜ್‌ಗೆ ಕಾರು ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

Last Updated 16 ಫೆಬ್ರುವರಿ 2023, 10:43 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪದ ಬಳಿ ಗುರುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ರಿಡ್ಜ್‌ಗೆ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕೂ ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದು, ಇವರೆಲ್ಲರೂ ತೆಲಂಗಾಣದವರು ಎಂದು ಕುಕನೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲೆಯಿಂದ ಗದಗ ಮಾರ್ಗದಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಮೃತಪಟ್ಟವರ ವಿವರ ಹುಡುಕಲಾಗುತ್ತಿದೆ ಎಂದು ಹೇಳಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನ ಬಿಡಿಭಾಗಗಳು ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT